Healht Care Tips: ಇತ್ತೀಚಿನ ದಿನಗಳಲ್ಲಿ ಪ್ರತಿ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬ ವ್ಯಕ್ತಿ ಕೆಟ್ಟ ಜೀವನಶೈಲಿ ಮತ್ತು ಆಹಾರದ ಕಾರಣದಿಂದ ಬೊಜ್ಜಿನ ಸಮಸ್ಯೆ ಎದುರಿಸುತ್ತಿದ್ದಾರೆ. ಇದೇ ವೇಳೆ ಜನರು ತೂಕ ಇಳಿಕೆ ಮಾಡಿಕೊಳ್ಳಲು ಹರಸಾಹಸವನ್ನೇ ಪಡುತ್ತಿದ್ದಾರೆ. ಜನರು ತೂಕ ಇಳಿಸಿಕೊಳ್ಳಲು ಮತ್ತು ಜಿಮ್‌ನಲ್ಲಿ ಗಂಟೆಗಟ್ಟಲೆ ಕಾಲ ಕಳೆಯುತ್ತಾರೆ ಮತ್ತು ಡಯಟ್‌ಗೆ ಮೊರೆ ಹೋಗುತ್ತಾರೆ. ಆದರೆ, ಇಷ್ಟೆಲ್ಲಾ ಮಾಡಿದರೂ ಕೂಡ ಬೊಜ್ಜು ಕಡಿಮೆಯಾಗುವುದಿಲ್ಲ. ಇನ್ನೊಂದೆಡೆ ತೂಕವನ್ನು ಕಡಿಮೆ ಮಾಡಲು ಸಿಹಿ ಪದಾರ್ಥಗಳನ್ನು ಸೇವಿಸಬೇಡಿ ಎಂದು ಜನರು ಸಲಹೆ ನೀಡುವುದನ್ನು ನೀವು ಕೇಳಿರಬಹುದು. ಆದರೆ ಈ ಸಂದರ್ಭದಲ್ಲಿ ನೀವು ಜೇನುತುಪ್ಪವನ್ನು ಸೇವಿಸಬಹುದು. ಹೌದು, ಜೇನುತುಪ್ಪವು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಮತ್ತೊಂದೆಡೆ, ವಿಟಮಿನ್ ಬಿ-6, ವಿಟಮಿನ್ ಸಿ, ಕಾರ್ಬೋಹೈಡ್ರೇಟ್‌ಗಳಂತಹ ಪೋಷಕಾಂಶಗಳು ಜೇನುತುಪ್ಪದಲ್ಲಿ ಇದ್ದು, ಇವು ದೇಹದ ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ತೂಕವನ್ನು ಕಳೆದುಕೊಳ್ಳಲು ಜೇನುತುಪ್ಪವನ್ನು ಹೇಗೆ ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ

COMMERCIAL BREAK
SCROLL TO CONTINUE READING

ತೂಕವನ್ನು ಕಳೆದುಕೊಳ್ಳಲು, ಜೇನುತುಪ್ಪವನ್ನು ಈ ರೀತಿ ಬಳಸಿ
ಜೇನುತುಪ್ಪ ಮತ್ತು ನಿಂಬೆ ರಸ

ಜೇನುತುಪ್ಪ ಮತ್ತು ನಿಂಬೆ ರಸದ ಮಿಶ್ರಣವು ತೂಕ ಇಳಿಕೆಗೆ ಒಂದು ಪರಣಾಮಕಾರಿ ಮದ್ದಾಗಿದೆ. ಇದಕ್ಕಾಗಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರಿನಲ್ಲಿ ಜೇನುತುಪ್ಪ ಮತ್ತು ನಿಂಬೆ ಕುಡಿಯುವುದರಿಂದ ತೂಕವನ್ನು ಸುಲಭವಾಗಿ ಇಳಿಸಿಕೊಳ್ಳಬಹುದು. ಇದನ್ನು ಮಾಡುವುದರಿಂದ, ದೇಹದಿಂದ ವಿಷಕಾರಿ ಪದಾರ್ಥಗಳು ಹೊರಹೋಗುತ್ತವೆ ಮತ್ತು ದೇಹವು ನಿರ್ವಿಷಗೊಳ್ಳುತ್ತದೆ. ಮತ್ತೊಂದೆಡೆ, ಬೆಚ್ಚಗಿನ ನೀರಿನಲ್ಲಿ ಜೇನುತುಪ್ಪ ಮತ್ತು ನಿಂಬೆ ಕುಡಿಯುವುದು ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕಡಿಮೆ ಮಾಡುತ್ತದೆ, ಆದ್ದರಿಂದ ನೀವು ವೇಗವಾಗಿ ತೂಕವನ್ನು ಕಳೆದುಕೊಳ್ಳಲು ಬಯಸಿದರೆ, ನೀವು ಪ್ರತಿದಿನ ಜೇನುತುಪ್ಪ ಮತ್ತು ನಿಂಬೆಯನ್ನು ಸೇವಿಸಬಹುದು.


ಇದನ್ನೂ ಓದಿ-ಮಳೆಗಾಲದಲ್ಲಿ ಕೀಲು ನೋವನ್ನು ನಿರ್ವಹಿಸಲು ಇಲ್ಲಿವೆ ಕೆಲ ಅತ್ಯುತ್ತಮ ವಿಧಾನಗಳು!

ಜೇನುತುಪ್ಪ ಮತ್ತು ಬಿಸಿನೀರು
ಹೆಚ್ಚುತ್ತಿರುವ ತೂಕವನ್ನು ಕಡಿಮೆ ಮಾಡಲು ಬಿಸಿನೀರಿನೊಂದಿಗೆ ಜೇನುತುಪ್ಪವನ್ನು ಬೆರೆಸಿ ಕುಡಿಯುವುದು ಹಳೆಯ ಪಾಕವಿಧಾನವಾಗಿದೆ. ಇದನ್ನು ಸೇವಿಸಲು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಜೇನುತುಪ್ಪದೊಂದಿಗೆ ಬೆರೆಸಿ ಕುಡಿಯಿರಿ.ಹೀಗೆ ಮಾಡುವುದರಿಂದ ದೇಹದ ಚಯಾಪಚಯವು ಹೆಚ್ಚುತ್ತದೆ ಮತ್ತು ದೇಹದಲ್ಲಿ ದಿನವಿಡಿ ದೇಹದಲ್ಲಿ ಶಕ್ತಿ ಇರುತ್ತದೆ.


ಇದನ್ನೂ ಓದಿ-ಸೂಕ್ತ ಸಂತಾನ ಭಾಗ್ಯ ಪ್ರಾಪ್ತಿ ಹೇಗೆ ಮಾಡಿಕೊಳ್ಳಬೇಕು? ಗರ್ಭಧಾರಣೆಗೆ ಯಾವ ದಿನಗಳು ಶುಭ?

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.