Custard Apple Benefits: ಸೀತಾಫಲ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಚಳಿಗಾಲ ಪ್ರಾರಂಭವಾದಾಗ ಎಲ್ಲರಿಗೂ ಸೀತಾಫಲ ನೆನಪಾಗುತ್ತದೆ. ಈ ಋತುವಿನಲ್ಲಿ ಲಭ್ಯವಿರುವ ಸೀತಾಫಲವನ್ನು ತಿನ್ನಲು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ. ಆದರೆ ಮಧುಮೇಹ ಹೊಂದಿರುವ ಜನರು ಸೀತಾಫಲವನ್ನು ಅಪ್ಪಿತಪ್ಪಿಯೂ ತಿನ್ನಬಾರದು.
ಮಧುಮೇಹ ಇರುವವರು ಸೀತಾಫಲವನ್ನು ತಿನ್ನಬಹುದೇ? ಈ ಬಗ್ಗೆ ವೈದ್ಯಕೀಯ ತಜ್ಞರು ಏನು ಹೇಳುತ್ತಾರೆ? ಪ್ರಸ್ತುತ ಅನೇಕ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಈ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವ ಹೆಚ್ಚಿನ ಜನರು ಭಾರತದಲ್ಲಿದ್ದಾರೆಂದು ಹಲವಾರು ಅಧ್ಯಯನಗಳು ತೋರಿಸಿವೆ. ಭಾರತವನ್ನು ಮಧುಮೇಹದ ರಾಜಧಾನಿ ಎಂತಲೂ ಕರೆಯಲಾಗುತ್ತದೆ.
ಇಂದು ಮಧುಮೇಹವು ದೊಡ್ಡವರಿರಲಿ ಅಥವಾ ಚಿಕ್ಕವರಿರಲಿ ಎಲ್ಲಾ ವಯಸ್ಸಿನ ಜನರಿಗೆ ದೊಡ್ಡ ಸಮಸ್ಯೆಯಾಗಿದೆ. ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯೇ ಮಧುಮೇಹಕ್ಕೆ ಪ್ರಮುಖ ಕಾರಣವೆಂದು ಆರೋಗ್ಯ ತಜ್ಞರು ಹೇಳಿದ್ದಾರೆ.
ಸೀತಾಫಲದಲ್ಲಿ ಆಂಟಿ-ಆಕ್ಸಿಡೆಂಟ್‌ಗಳು, ಕ್ಯಾರಟೆನಾಯ್ಡ್‌ಗಳು, ಫ್ಲೇವನಾಯ್ಡ್‌ಗಳು, ವಿಟಮಿನ್ C, B6, ಮೆಗ್ನೀಸಿಯಮ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಫೈಬರ್ ಸಮೃದ್ಧವಾಗಿದೆ. ಮಧುಮೇಹದಿಂದ ಬಳಲುತ್ತಿರುವವರು ಹೆಚ್ಚಿನ ಗ್ಲೈಸೆಮಿಕ್ ಇಂಡೆಕ್ಸ್ ಇರುವ ಹಣ್ಣುಗಳನ್ನು ಸೇವಿಸುತ್ತಾರೆ. ಗ್ಲೈಸೆಮಿಕ್ ಇಂಡೆಕ್ಸ್ ಇರುವ ಹಣ್ಣುಗಳಲ್ಲಿ ಈ ಸೀತಾಫಲವೂ ಒಂದು. ಈ ಹಣ್ಣಿನಲ್ಲಿ ಫ್ರಕ್ಟೋಸ್ ಇರುವುದರಿಂದ ಮಧುಮೇಹಿಗಳಿಗೆ ಇದು ಒಳ್ಳೆಯದಲ್ಲವೆಂದು ಹೇಳಲಾಗಿದೆ.
ಇದನ್ನೂ ಓದಿ: ಕಿಡ್ನಿ ವೈಫಲ್ಯದ ಈ 5 ಲಕ್ಷಣಗಳು ಮುಖದಲ್ಲಿ ಗೋಚರಿಸುತ್ತವೆ..! ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ
ಇನ್ಸುಲಿನ್ ಬಳಸದ ಮಧುಮೇಹ ರೋಗಿಗಳು ಸೀತಾಫಲವನ್ನು ಮಿತವಾಗಿ ತೆಗೆದುಕೊಳ್ಳಬಹುದು. ಇದನ್ನು 15 ದಿನಕ್ಕೊಮ್ಮೆ ತಿನ್ನುವುದರಿಂದ ಅವರ ಸಕ್ಕರೆಯ ಮಟ್ಟದಲ್ಲಿ ಯಾವುದೇ ಬದಲಾವಣೆಯಾಗಲ್ಲ. ಆದರೆ ಇನ್ಸುಲಿನ್ ತೆಗೆದುಕೊಳ್ಳುವ ಮಧುಮೇಹ ರೋಗಿಗಳು ಈ ಹಣ್ಣನ್ನು ತಿನ್ನುವ ಮೂಲಕ ತಮ್ಮ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಈ ಸಿಹಿ ಹಣ್ಣನ್ನು ಸೇವಿಸುವುದರಿಂದ ಅವರ ಸಕ್ಕರೆ ಪ್ರಮಾಣ ಹೆಚ್ಚಾದರೆ ಇನ್ಸುಲಿನ್ ಪ್ರಮಾಣವನ್ನು ಮತ್ತೊಮ್ಮೆ ಹೆಚ್ಚಿಸಬೇಕಾಗುತ್ತದೆ. ಅದಕ್ಕಾಗಿಯೇ ಮಧುಮೇಹದಿಂದ ಬಳಲುತ್ತಿರುವವರು ಈ ಹಣ್ಣನ್ನು ತಿನ್ನಬಾರದು ಎಂದು ಸಲಹೆ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









