ಹಣ್ಣುಗಳು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಕಾರಿಯಾಗಿವೆ. ಆದರೆ ನಾವು ಕೆಲವು ಬಗೆಯ ಹಣ್ಣುಗಳನ್ನು ಮಾತ್ರ ತಿನ್ನುತ್ತೇವೆ. ಕೆಲವು ಹಣ್ಣುಗಳು ರುಚಿ ನೋಡಿಯೂ ಇರುವುದಿಲ್ಲ. ಅಂತಹ ಹಣ್ಣುಗಳಲ್ಲಿ ಪಿಯರ್ ಹಣ್ಣು ಕೂಡ ಒಂದು. ಪಿಯರ್ ಹಸಿರು ಅಥವಾ ಹಳದಿ ಬಣ್ಣದಲ್ಲಿರುತ್ತವೆ. ಅವುಗಳ ಬೆಲೆಯೂ ಸ್ವಲ್ಪ ಹೆಚ್ಚಾಗಿದೆ. ಆದರೆ ಪಿಯರ್ ತಿನ್ನುವುದರಿಂದಾಗುವ ಪ್ರಯೋಜನಗಳು ಅದ್ಭುತ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಪಿಯರ್ ಹಣ್ಣಿನಲ್ಲಿ ಆರೋಗ್ಯಕ್ಕೆ ಒಳ್ಳೆಯದಾದ ಹಲವು ಪೋಷಕಾಂಶಗಳಿವೆ. ಪಿಯರ್ ತಿನ್ನುವುದರಿಂದ ನಮಗೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳೋಣ.
ಪಿಯರ್ ಹಣ್ಣಿನಲ್ಲಿ ಪೊಟ್ಯಾಸಿಯಮ್ ಅಧಿಕವಾಗಿರುತ್ತದೆ. ಇದರಲ್ಲಿ ನಾರಿನಂಶವೂ ಅಧಿಕವಾಗಿದೆ. ಇವು ಕೊಲೆಸ್ಟ್ರಾಲ್ ಅನ್ನು ಸಹ ಕಡಿಮೆ ಮಾಡುತ್ತದೆ. ಇದರಿಂದ ಹೃದಯವನ್ನು ಆರೋಗ್ಯವಾಗಿಡಬಹುದು. ಪಿಯರ್ ತಿನ್ನುವುದರಿಂದ ತೂಕ ನಿಯಂತ್ರಣಕ್ಕೆ ಬರುತ್ತದೆ. ಇದರಲ್ಲಿ ಕ್ಯಾಲೋರಿ ಕಡಿಮೆ ಮತ್ತು ಫೈಬರ್ ಅಧಿಕವಾಗಿದ್ದು ದೀರ್ಘಕಾಲದವರೆಗೆ ಹಸಿವಾಗದಂತೆ ನೋಡಿಕೊಳ್ಳುತ್ತದೆ.
ಪಿಯರ್ ಫ್ರೂಟ್‌ನಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಅಧಿಕವಾಗಿವೆ. ಇವುಗಳನ್ನು ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಹಲವು ರೀತಿಯ ಸೋಂಕುಗಳನ್ನು ತಪ್ಪಿಸಬಹುದು. ನಾರಿನಂಶ ಅಧಿಕವಾಗಿರುತ್ತದೆ. ಇವುಗಳನ್ನು ತಿನ್ನುವುದರಿಂದ ತಿಂದ ಆಹಾರ ಚೆನ್ನಾಗಿ ಜೀರ್ಣವಾಗಲು ಸಹಾಯವಾಗುತ್ತದೆ. ಹೊಟ್ಟೆ ಉಬ್ಬುವುದು ಮತ್ತು ಆಸಿಡಿಟಿಯಂತಹ ಸಮಸ್ಯೆಗಳನ್ನು ತಡೆಯುತ್ತದೆ.
ಇದನ್ನೂ ಓದಿ: ಮಧುಮೇಹಕ್ಕೆ ಬೆಸ್ಟ್ ಮದ್ದು ಈ ಪುಟ್ಟ ಹಣ್ಣು! ವಾರಕ್ಕೊಮ್ಮೆ ತಿಂದರೂ ಸಾಕು ವೃದ್ದಾಪ್ಯದಲ್ಲೂ ಹೃದಯಾಘಾತವಾಗಲ್ಲ..
ಪಿಯರ್ ಹಣ್ಣಿನಲ್ಲಿರುವ ಪ್ರಿಬಯಾಟಿಕ್‌ಗಳು ಜೀರ್ಣಕ್ರಿಯೆಯ ಆರೋಗ್ಯಕ್ಕೆ ಕೊಡುಗೆ ನೀಡುತ್ತವೆ. ಅವು ಕರುಳನ್ನು ಆರೋಗ್ಯವಾಗಿಡುತ್ತವೆ ಮತ್ತು ಮಲಬದ್ಧತೆಯಿಂದ ಪರಿಹಾರ ನೀಡುತ್ತವೆ. ಪಿಯರ್ ಹಣ್ಣಿನಲ್ಲಿ ಆಂಟಿಆಕ್ಸಿಡೆಂಟ್‌ಗಳು ಮತ್ತು ವಿಟಮಿನ್ ಸಿ ಇರುತ್ತವೆ. ಇವುಗಳನ್ನು ತಿನ್ನುವುದರಿಂದ ನಿಮ್ಮ ಚರ್ಮವು ಸುಕ್ಕುಗಟ್ಟುವುದನ್ನು ತಡೆಯಬಹುದು. ನೀವು ಸುಂದರವಾಗಿ ಮತ್ತು ಯೌವ್ವನದಿಂದ ಕಾಣಿಸಬಹುದು.
ಮೂಳೆಗಳನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡಲು ಪಿಯರ್ ಸಹಾಯ ಮಾಡುತ್ತದೆ. ಅವು ಆಸ್ಟಿಯೊಪೊರೋಸಿಸ್‌ನಂತಹ ಅಪಾಯಕಾರಿ ಸಮಸ್ಯೆಗಳನ್ನು ತಡೆಯುತ್ತವೆ. ವಿಶೇಷವಾಗಿ ಈ ಹಣ್ಣುಗಳಲ್ಲಿರುವ ಪಾಲಿಫಿನಾಲ್‌ಗಳು ಜೀವಕೋಶದ ಹಾನಿಯನ್ನು ತಡೆಯುತ್ತವೆ. ಸ್ವತಂತ್ರ ರಾಡಿಕಲ್‌ಗಳನ್ನು ನಿವಾರಿಸುತ್ತದೆ. ಇದು ಕ್ಯಾನ್ಸರ್ ಮತ್ತು ಹೃದಯಾಘಾತವನ್ನು ತಡೆಯುತ್ತದೆ.
ಪಿಯರ್ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡುತ್ತದೆ. ಇದರ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವು ಮಧುಮೇಹಿಗಳಿಗೆ ಸಹಾಯ ಮಾಡುತ್ತದೆ. ಪಿಯರ್ ಎರಡು ರೀತಿಯ ಫೈಬರ್ ಅನ್ನು ಹೊಂದಿರುತ್ತದೆ. ಈ ಹಣ್ಣುಗಳಲ್ಲಿ ಕರಗುವ ಮತ್ತು ಕರಗದ ನಾರು ಇರುವುದರಿಂದ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
ಇದನ್ನೂ ಓದಿ: ಮಧುಮೇಹಕ್ಕೆ ಮದ್ದು ವರ್ಷದಲ್ಲಿ ಎರಡೇ ತಿಂಗಳು ಮಾತ್ರ ಸಿಗುವ ʼಈʼ ಪುಟ್ಟ ಹಣ್ಣು! ಒಮ್ಮೆ ತಿಂದರೂ ಸಾಕು ಹೃದಯಾಘಾತವಾಗಲ್ಲ..
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









