Periods Pain Home Remedies: ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಅನೇಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಅಂತೆಯೇ ಮಹಿಳೆಯರು ಪ್ರತಿ ತಿಂಗಳು ಮುಟ್ಟಿನ ಸಮಯದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮುಟ್ಟಿನ ಸಮಯದಲ್ಲಿ ಅಸಹನೀಯ ನೋವಿನಿಂದಾಗಿ ಆ ದಿನಗಳಲ್ಲಿ ಮಹಿಳೆಯರು ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಾರೆ.
ಅನೇಕ ಮಹಿಳೆಯರು ತಮ್ಮ ಸಮಸ್ಯೆಯನ್ನು ಹೋಗಲಾಡಿಸಲು ಸಾಮಾನ್ಯವಾಗಿ ನೋವು ನಿವಾರಕ ಮಾತ್ರೆಗಳನ್ನು ಸೇವಿಸುತ್ತಾರೆ. ಆದರೆ ಕೆಲವೊಮ್ಮೆ ವೈದ್ಯರ ಸಲಹೆಯಿಲ್ಲದೆ ಈ ಔಷಧಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ. ಆದ್ದರಿಂದ, ಕೆಲ ಮನೆಮದ್ದುಗಳನ್ನು ಅನುಸರಿಸಬಹುದು. ಇದು ಪಿರಿಯಡ್ಸ್ ನೋವಿನಿಂದ ನಿಮಗೆ ಪರಿಹಾರವನ್ನು ನೀಡುತ್ತದೆ.
ಇದನ್ನೂ ಓದಿ: ಮಾವಿನ ಗೊರಟೆ ವೇಸ್ಟ್ ಎಂದು ಬಿಸಾಡದಿರಿ: 10 ನಿಮಿಷದಲ್ಲಿ ಬಿಳಿಕೂದಲನ್ನು ಕಪ್ಪಾಗಿಸಲು ಇಷ್ಟೇ ಸಾಕು!
ಶುಂಠಿ: ಶುಂಠಿಯನ್ನು ಅನೇಕ ಸಮಸ್ಯೆಗಳಿಂದ ಪರಿಹಾರ ಪಡೆಯಲು ಬಳಸಲಾಗುತ್ತದೆ. ಪಿರಿಯಡ್ ನೋವಿಗೂ ಇದು ಪರಿಹಾರ ನೀಡುತ್ತದೆ. ನೋವಿನಿಂದ ತಕ್ಷಣದ ಪರಿಹಾರವನ್ನು ಪಡೆಯಲು, ಒಂದು ಕಪ್ ನೀರಿನಲ್ಲಿ ಒಂದಿಷ್ಟು ತುಂಡು ಶುಂಠಿಯನ್ನು ಹಾಕಿ ಕುದಿಸಿ. ಊಟದ ನಂತರ ದಿನಕ್ಕೆ ಮೂರು ಬಾರಿ ಕುಡಿಯಿರಿ.
ಅಜ್ವೈನ್: ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಅಜ್ವೈನ್ ಅನ್ನು ರಾಮಬಾಣವೆಂದು ಪರಿಗಣಿಸಲಾಗುತ್ತದೆ. ಪಿರಿಯಡ್ಸ್ ಸಮಯದಲ್ಲಿ ಮಹಿಳೆಯರಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತವೆ. ಇದರಿಂದಾಗಿ ಹೊಟ್ಟೆ ನೋವಿನ ಸಮಸ್ಯೆ ಪ್ರಾರಂಭವಾಗುತ್ತದೆ. ಇದನ್ನು ತೊಡೆದುಹಾಕಲು, ಅರ್ಧ ಚಮಚ ಅಜ್ವೈನ್ ಮತ್ತು ಅರ್ಧ ಚಮಚ ಉಪ್ಪನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದು ಒಳ್ಳೆಯದು. ಇದು ತ್ವರಿತ ಪರಿಹಾರವನ್ನು ನೀಡುತ್ತದೆ.
ತುಳಸಿ: ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತುಳಸಿ ನೈಸರ್ಗಿಕ ನೋವು ನಿವಾರಕದಂತೆ ಕೆಲಸ ಮಾಡುತ್ತದೆ. ತುಳಸಿಯಲ್ಲಿರುವ ಕೆಫೀಕ್ ಆಮ್ಲವು ನೋವಿನಿಂದ ಪರಿಹಾರವನ್ನು ನೀಡುತ್ತದೆ. ಪೀರಿಯಡ್ ನೋವಿನಿಂದ ಪರಿಹಾರ ಪಡೆಯಲು ತುಳಸಿ ಎಲೆಯನ್ನು ಅರ್ಧ ಕಪ್ ನೀರಿನಲ್ಲಿ ಕುದಿಸಿ ಕುಡಿಯಬಹುದು.
ಅರಿಶಿನ ಹಾಲು: ಅರಿಶಿನವು ಪ್ರತಿಜೀವಕ ಗುಣಲಕ್ಷಣಗಳಿಗೆ ಹೆಸರುವಾಸಿ. ಇದು ಪೀರಿಯಡ್ಸ್ ನೋವಿನಿಂದ ಪರಿಹಾರವನ್ನು ನೀಡುವಲ್ಲಿ ಪರಿಣಾಮಕಾರಿ. ಇದರ ಸೇವನೆಯು ದೇಹದಲ್ಲಿ ಶಾಖವನ್ನು ಕಾಪಾಡಿ ಹೊಟ್ಟೆ ನೋವಿನಿಂದ ಪರಿಹಾರವನ್ನು ನೀಡುತ್ತದೆ. ಪಿರಿಯಡ್ಸ್ ಆಗುವ ಮೊದಲು ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ನೋವಿನ ಸಮಸ್ಯೆಯಿಂದ ಪರಿಹಾರವನ್ನು ಪಡೆಯಬಹುದು.
ಪಪ್ಪಾಯಿ: ಅಸಮರ್ಪಕ ಹರಿವಿನಿಂದ ಹೆಚ್ಚಿನ ಮಹಿಳೆಯರು ಪಿರಿಯಡ್ಸ್ ಸಮಯದಲ್ಲಿ ನೋವಿನ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಹೀಗಿರುವಾಗ ಪಪ್ಪಾಯಿ ನಿಮಗೆ ತುಂಬಾ ಸಹಾಯಕವಾಗಬಹುದು.
ಇದನ್ನೂ ಓದಿ: ಪಿಸ್ತಾ ತಿನ್ನುವ ಮುನ್ನ ಎಚ್ಚರ! ಒಳ್ಳೆಯದು ಎಂದು ಅತಿಯಾಗಿ ತಿಂದರೆ ಬಾಧಿಸುತ್ತೆ ಈ ಮಾರಕ ಕಾಯಿಲೆ
ಸೂಚನೆ: ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಮತ್ತು ವೃತ್ತಿಪರ ವೈದ್ಯಕೀಯ ಸಲಹೆಯಾಗಿ ತೆಗೆದುಕೊಳ್ಳಬಾರದು. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.