ಬೆಂಗಳೂರು: ಮಧುಮೇಹ ಇಂದು ಒಂದು  ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಇಂದಿನ ಕಾಲದಲ್ಲಿ ವಯೋವೃದ್ಧರು ಮಾತ್ರವಲ್ಲದೆ, ಯುವಕರು, ಮಕ್ಕಳು ಸಹ ಈ ವಾಸಿಯಾಗದ ಕಾಯಿಲೆಗೆ ಗುರಿಯಾಗುತ್ತಿದ್ದಾರೆ. ವಾಸ್ತ್ವದಲ್ಲಿ, ಮಧುಮೇಹವು ಜೀವನಶೈಲಿಯ ಕಾಯಿಲೆಯಾಗಿದೆ, ಆದ್ದರಿಂದ ಇದನ್ನು ನಾವು ಕೇವಲ ನಿಯಂತ್ರಿಸಬಹುದು. ರಕ್ತದಲ್ಲಿನ ಸಕ್ಕರೆ ಮಟ್ಟವು ಸಾಮಾನ್ಯ ಮಟ್ಟಕ್ಕಿಂತ ಹೆಚ್ಚು ಅಥವಾ ಕಡಿಮೆ ಇದ್ದರೆ, ಎರಡೂ ಸಾಕಷ್ಟು ಅಪಾಯಕಾರಿ. ಹೀಗಾಗಿ, ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ನೀವು ಕೆಲ ಮನೆಮದ್ದುಗಳ ಸಹಾಯವನ್ನು ತೆಗೆದುಕೊಳ್ಳಬಹುದು. ಈ ಮನೆಮದ್ದುಗಳಲ್ಲಿ ಮೆಂತ್ಯ ಬೀಜಗಳೂ ಶಾಮೀಲಾಗಿವೆ. ಹೌದು, ಮೆಂತ್ಯ ಬೀಜಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ತುಂಬಾ ಸಹಾಯ ಸಿಗುತ್ತದೆ (Health News In Kannada). ಬನ್ನಿ, ಮಧುಮೇಹದಲ್ಲಿ ಮೆಂತ್ಯ ಬೀಜಗಳು ಹೇಗೆ ಪ್ರಯೋಜನಕಾರಿ ಮತ್ತು ಅದನ್ನು ಹೇಗೆ ಬಳಸುವುದು ಎಂಬುದನ್ನು ತಿಳಿದುಕೊಳ್ಳೋಣ,


COMMERCIAL BREAK
SCROLL TO CONTINUE READING

ಮಧುಮೇಹ ರೋಗಿಗಳಿಗೆ ಮೆಂತ್ಯ ಬೀಜಗಳು ಹೇಗೆ ಪ್ರಯೋಜನಕಾರಿ?
NCBI ಪ್ರಕಾರ, ಮೆಂತ್ಯ ಬೀಜಗಳು ಮಧುಮೇಹ-ವಿರೋಧಿ ಗುಣಲಕ್ಷಣಗಳನ್ನು ಹೊಂದಿವೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೆಂತ್ಯ ಬೀಜಗಳು ರಕ್ತದಲ್ಲಿನ ಇನ್ಸುಲಿನ್ ಪ್ರಮಾಣವನ್ನು ಹೆಚ್ಚಿಸುತ್ತವೆ, ಇದು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಫೈಬರ್ ಹೇರಳ ಪ್ರಮಾಣದಲ್ಲಿದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಮೆಂತ್ಯ ಬೀಜಗಳ ಸೇವನೆಯು ಚಯಾಪಚಯವನ್ನು ಹೆಚ್ಚಿಸುತ್ತದೆ, ಇದು ತೂಕ ಇಳಿಕೆಗೂ ಕೂಡ ಸಹಾಯ ಮಾಡುತ್ತದೆ.


ಮಧುಮೇಹದಲ್ಲಿ ಮೆಂತ್ಯಯನ್ನು ಹೇಗೆ ಸೇವಿಸಬೇಕು?
ತರಕಾರಿಗಳಿಗೆ ಮೆಂತ್ಯ ಸೇರಿಸಿ

ನೀವು ಮಧುಮೇಹ ಹೊಂದಿದ್ದರೆ, ನೀವು ತರಕಾರಿಗಳಿಗೆ ಪರಿಮಳವನ್ನು ಹೆಚ್ಚಿಸಲು ಅವುಗಳಲ್ಲಿ ಮೆಂತ್ಯ ಬೀಜಗಳನ್ನು ಬಳಸಬಹುದು. ಇದರಿಂದ ತರಕಾರಿಯ ರುಚಿ ಹೆಚ್ಚುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಅಂಶವೂ ನಿಯಂತ್ರಣದಲ್ಲಿರುತ್ತದೆ.


ಮೆಂತ್ಯ ನೀರು
ನೀವು ಮಧುಮೇಹಿಗಳಾಗಿದ್ದರೆ, ನೀವು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರನ್ನು ಕುಡಿಯಬಹುದು. ಇದನ್ನು ಮಾಡಲು, ಒಂದು ಚಮಚ ಮೆಂತ್ಯ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ. ನಂತರ ಈ ನೀರನ್ನು ಫಿಲ್ಟರ್ ಮಾಡಿ ಮತ್ತು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಅಲ್ಲದೆ, ನೀವು ನೆನೆಸಿದ ಮೆಂತ್ಯ ಬೀಜಗಳನ್ನು ಅಗಿಯಬಹುದು.


ಮೊಳಕೆಯೊಡೆದ ಮೆಂತ್ಯ
ಮಧುಮೇಹ ರೋಗಿಗಳು ಮೊಳಕೆಯೊಡೆದ ಮೆಂತ್ಯವನ್ನು ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ಇದಕ್ಕಾಗಿ ರಾತ್ರಿ ಮಲಗುವ ಮುನ್ನ ಮೆಂತ್ಯವನ್ನು ನೀರಿನಲ್ಲಿ ನೆನೆಸಿಡಿ. ಮರುದಿನ ಬೆಳಗ್ಗೆ  ನೀರನ್ನು ಬಸಿದು ಹತ್ತಿ ಬಟ್ಟೆಯಲ್ಲಿ ಕಟ್ಟಿಕೊಳ್ಳಿ. ಮೆಂತ್ಯ 1-2 ದಿನಗಳಲ್ಲಿ ಮೊಳಕೆಯೊಡೆಯುತ್ತದೆ. ಪ್ರತಿದಿನ ಇದನ್ನು ಸಣ್ಣ ಪ್ರಮಾಣದಲ್ಲಿ ಸೇವಿಸಿ.


ಇದನ್ನೂ ಓದಿ-ನಿಜವಾಗಿಯೂ ನಿತ್ಯ ಕಪ್ಪು ಚಹಾ ಸೇವನೆ ಮಾಡಿದರೆ ಮಧುಮೇಹ ನಿಯಂತ್ರಣಕ್ಕೆ ಬರುತ್ತಾ!


ಮೆಂತ್ಯ ಚಹಾ
ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು, ನೀವು ಮೆಂತ್ಯ ಚಹಾವನ್ನು ತಯಾರಿಸಬಹುದು ಮತ್ತು ಅದನ್ನು ಕುಡಿಯಬಹುದು. ಇದಕ್ಕಾಗಿ ಮೆಂತ್ಯ ಕಾಳುಗಳನ್ನು ಒಂದು ಲೋಟ ನೀರಿಗೆ ಹಾಕಿ ಕುದಿಸಿ. ನಂತರ ಅದನ್ನು ಸೋಸಿ ಅದಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ಸೇವಿಸಿ.


ಇದನ್ನೂ ಓದಿ-Cholesterol-Diabetes, ತೂಕ ಇಳಿಕೆ, ಕ್ಯಾನ್ಸರ್, ಹೃದ್ರೋಗ ಎಲ್ಲದಕ್ಕೂ ಒಂದೇ ರಾಮಬಾಣ ಈ ರೊಟ್ಟಿ!

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.