Turmeric in Winters : ಚಳಿಗಾಲದಲ್ಲಿ ಶೀತ, ಕೆಮ್ಮು ಮತ್ತು ಜ್ವರದಂತಹ ಕಾಲೋಚಿತ ರೋಗಗಳ ಅಪಾಯ ನಿರಂತರವಾಗಿ ಕಾಡುತ್ತಿರುತ್ತದೆ. ಈ ರೋಗಗಳನ್ನು ತಪ್ಪಿಸಲು, ಜೀವನಶೈಲಿ ಮತ್ತು ಆಹಾರ ಕ್ರಮವನ್ನು ಬದಲಾಯಿಸುವುದು ಬಹಳ ಮುಖ್ಯ. ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿರುವ ಪದಾರ್ಥಗಳನ್ನು ಆಹಾರದಲ್ಲಿ ಸೇವಿಸಬೇಕು. ಇಂಥಹ ಆಹಾರ ಪದಾರ್ಥಗಳಲ್ಲಿ ಅರಿಶಿನ ಕೂಡಾ ಒಂದು. ಅರಿಶಿನ ಅನೇಕ ಆರೋಗ್ಯ ಗುಣಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟುಕೊಂಡಿದೆ. ಚಳಿಗಾಲದಲ್ಲಿ ನಿಮ್ಮ ಆರೋಗ್ಯವನ್ನು ಕಾಪಾಡಲು ಅರಿಶಿನ ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ದೇಹವು ಬೆಚ್ಚಗಿರುತ್ತದೆ. 


COMMERCIAL BREAK
SCROLL TO CONTINUE READING

ವಿಟಮಿನ್ ಸಿ, ವಿಟಮಿನ್ ಇ, ಕಬ್ಬಿಣ, ಸತು ಸೇರಿದಂತೆ ಹಲವು ಪೋಷಕಾಂಶಗಳು ಅರಿಶಿನದಲ್ಲಿ ಕಂಡುಬರುತ್ತವೆ. ಇದಲ್ಲದೆ, ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ಮತ್ತು ನಂಜುನಿರೋಧಕ ಗುಣಲಕ್ಷಣಗಳು ಕೂಡಾ ಅರಿಶಿನವನ್ನು ಹೆಚ್ಚು ವಿಶೇಷವಾಗಿಸುತ್ತದೆ. ಚಳಿಗಾಲದಲ್ಲಿ ಅರಿಶಿನವನ್ನು ನಿಮ್ಮ ಆಹಾರದಲ್ಲಿ ಹೇಗೆ ಸೇರಿಸಿಕೊಳ್ಳಬಹುದು ಎನ್ನುವ ಮಾಹಿತಿ ಇಲ್ಲಿದೆ. 


ಇದನ್ನೂ ಓದಿ : ಚಳಿಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಇರಲಿ ವಿಶೇಷ ಗಮನ: ತಾಯಂದಿರಿಗೆ ಇಲ್ಲಿದೆ ಸಿಂಪಲ್ ಟಿಪ್ಸ್
 
ಅರಿಶಿನ ಹಾಲು : 
ಅರಿಶಿನ ಹಾಲು ಚಳಿಗಾಲದಲ್ಲಿ ನಿಮ್ಮ ದೇಹವನ್ನು ಬೆಚ್ಚಗಿಡಲು ಸಹಾಯ ಮಾಡುತ್ತದೆ. ಇದರ ಸೇವನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಕೆಮ್ಮು ಮತ್ತು ಶೀತದಂತಹ ರೋಗಗಳಿಂದ ರಕ್ಷಣೆ ಸಿಗುತ್ತದೆ. ಅರಿಶಿನ ಹಾಲು ತಯಾರಿಸಲು, ಒಂದು ಲೋಟ ಹಾಲಿಗೆ ಒಂದು ಚಮಚ ಅರಿಶಿನ ಮತ್ತು ಸ್ವಲ್ಪ ಬೆಲ್ಲವನ್ನು ಮಿಶ್ರಣ ಮಾಡಿ. ಇದರಿಂದ ದೇಹದಲ್ಲಿ ಕಾಣಿಸಿಕೊಳ್ಳುವ  ನೋವಿನಿಂದಲೂ ಪರಿಹಾರ ಸಿಗುತ್ತದೆ.


ಅರಿಶಿನ ಮತ್ತು ತುಳಸಿ ಕಷಾಯ  : 
ಅರಿಶಿನ ಮತ್ತು ತುಳಸಿ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ, ಆಂಟಿಫಂಗಲ್ ಗುಣಗಳನ್ನು ಹೊಂದಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ನಿಮ್ಮ ಚರ್ಮದ ಆರೋಗ್ಯ ಕಾಪಾಡಲು ಕೂಡಾ ಇದು ಸಹಕಾರಿಯಾಗಿದೆ. ಅರಿಶಿನ ಮತ್ತು ತುಳಸಿ ಕಷಾಯವನ್ನು ಮಾಡಲು, ಬಾಣಲೆಯಲ್ಲಿ ನೀರನ್ನು ತೆಗೆದುಕೊಂಡು ಅದರಲ್ಲಿ 1 ಚಮಚ ಅರಿಶಿನದೊಂದಿಗೆ 7-8 ತುಳಸಿ ಎಲೆಗಳು ಮತ್ತು ಶುಂಠಿಯನ್ನು ಹಾಕಿ ಚೆನ್ನಾಗಿ ಕುದಿಸಿ. 


ಇದನ್ನೂ ಓದಿ : ಕೊಲೆಸ್ಟ್ರಾಲ್ ಮಟ್ಟ ತಿಳಿಯಲು ಲಿಪಿಡ್ ಪ್ರೊಫೈಲ್ ಟೆಸ್ಟ್ ಮಾಡಿಸುವಾಗ ಈ 5 ವಿಷಯಗಳ ಬಗ್ಗೆ ಇರಲಿ ವಿಶೇಷ ಗಮನ
 
ಅರಿಶಿನ ಚಹಾ : 
ಚಳಿಗಾಲದಲ್ಲಿ ಅರಿಶಿನ ಚಹಾವು ಉತ್ತಮ ಆಯ್ಕೆಯಾಗಿದೆ. ಬಾಣಲೆಯಲ್ಲಿ ಒಂದು ಕಪ್ ನೀರು ತೆಗೆದುಕೊಂಡು ಅದಕ್ಕೆ 1 ಚಮಚ ಅರಿಶಿನ, ಕರಿಮೆಣಸು ಮತ್ತು ಶುಂಠಿ ಹಾಕಿ ಕುದಿಸಿ. ನಂತರ ಇದಕ್ಕೆ ಜೇನುತುಪ್ಪ ಬೆರೆಸಿ ಕುಡಿಯಿರಿ. 
 
ಅರಿಶಿನ  ಓಮ ಕಾಳಿನ ನೀರು : 
ಚಳಿಗಾಲದಲ್ಲಿ ಅರಿಶಿನ ಮತ್ತು ಓಮ ಕಾಳಿನ ನೀರನ್ನು  ಸೇವಿಸಬಹುದು. ಇದರ ಸೇವನೆಯಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ನಿವಾರಣೆಯಾಗುವುದಲ್ಲದೆ ಕೆಮ್ಮು ಮತ್ತು ನೆಗಡಿಯಿಂದ ಉಪಶಮನ ದೊರೆಯುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.