Turmeric: ಚಳಿಗಾಲದಲ್ಲಿ ಕಾಡುವ ಕೆಮ್ಮು ಕಫಕ್ಕೆ ರಾಮಬಾಣ ಈ ಮಸಾಲೆ
Turmeric Benefits: ಹವಾಮಾನದಲ್ಲಿನ ಬದಲಾವಣೆ ಮತ್ತು ಮಾಲಿನ್ಯದಿಂದ ಅನೇಕ ಜನರು ಶೀತ, ಕೆಮ್ಮು ಮತ್ತು ಕಫದಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇಂತಹ ಸಮಸ್ಯೆಗಳನ್ನು ಮನೆಮದ್ದುಗಳಿಂದ ಗುಣಪಡಿಸಬಹುದು.
Turmeric Benefits: ಹವಾಮಾನ ಬದಲಾವಣೆ ಮತ್ತು ಮಾಲಿನ್ಯದಿಂದ ಅನೇಕ ಜನರು ಶೀತ, ಕೆಮ್ಮು ಮತ್ತು ಕಫದಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಯುವಕರಿಂದ ಹಿಡಿದು ವಯಸ್ಸಾದವರ ವರೆಗೂ ಎಲ್ಲರೂ ಈ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇಂತಹ ಸಮಸ್ಯೆಗಳನ್ನು ಮನೆಮದ್ದುಗಳಿಂದ ಗುಣಪಡಿಸಬಹುದು.
ಕಫ: ಚಳಿಗಾಲದಲ್ಲಿ ಅನೇಕ ಜನರು ಕಫದ ಸಮಸ್ಯೆಯಿಂದ ಬಳಲುತ್ತಾರೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಒಂದು ಬಟ್ಟಲಿನಲ್ಲಿ ಒಂದು ಚಮಚ ಜೇನುತುಪ್ಪಕ್ಕೆ ಅರ್ಧ ಚಮಚ ಅರಿಶಿನ ಸೇರಿಸಿ ಪೇಸ್ಟ್ ಮಾಡಿ. ಅದನ್ನು ನಾಲಿಗೆಯ ಮೇಲೆ ಇಟ್ಟು ನೆಕ್ಕಬೇಕು. ಹೀಗೆ ಮಾಡುವುದರಿಂದ ಗಂಟಲಿನಲ್ಲಿರುವ ವೈರಸ್ ಮತ್ತು ಬ್ಯಾಕ್ಟೀರಿಯಾಗಳನ್ನು ಹೋಗಲಾಡಿಸುವುದು.
ಕಾಳು ಮೆಣಸು: ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿದ್ದರೆ, ಎರಡು ಕಾಳುಮೆಣಸನ್ನು ಬಾಯಿಗೆ ಹಾಕಿಕೊಂಡು ಜಗಿದು ರಸವನ್ನು ನುಂಗಬೇಕು. ಹೀಗೆ ಮಾಡುವುದರಿಂದ ಕೆಮ್ಮು ಕಡಿಮೆಯಾಗುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.
ಇದನ್ನೂ ಓದಿ: Curd with Banana: ಮೊಸರಿನ ಜೊತೆ ಬಾಳೆಹಣ್ಣು ತಿಂದರೆ ದೇಹಕ್ಕೆ ಸಿಗುವುದು ಈ ಎಲ್ಲ ಪ್ರಯೋಜನ
ಶುಂಠಿ ಚಹಾ: ಕೆಮ್ಮು ಮತ್ತು ಶೀತವನ್ನು ನಿವಾರಿಸಲು ಶುಂಠಿ ಚಹಾ ಒಳ್ಳೆಯದು. ಶುಂಠಿಯ ಚಹಾ ಕುಡಿಯುವುದರಿಂದ ಕಫ ಬಿಡುಗಡೆಯಾಗುತ್ತದೆ. ನಿಮಗೆ ಉಸಿರಾಡಲು ಕಷ್ಟವಾಗಿದ್ದರೆ, ಸ್ವಲ್ಪ ಶುಂಠಿ ಚಹಾವನ್ನು ಕುಡಿಯಿರಿ.
ಬೆಳ್ಳುಳ್ಳಿ: ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳನ್ನು ಬೆಳ್ಳುಳ್ಳಿಯಿಂದ ಪರಿಹರಿಸಬಹುದು. ಕಫ ಹೊರ ಬರದಿದ್ದರೆ ಬೆಳ್ಳುಳ್ಳಿ ತಿನ್ನಿ. ಹಸಿ ಬೆಳ್ಳುಳ್ಳಿ ತಿಂದು ನೀರು ಕುಡಿಯುವುದರಿಂದ ಕಫ ಕರಗುತ್ತದೆ.
ಏಲಕ್ಕಿ: ಏಲಕ್ಕಿ ಚಳಿಗಾಲದಲ್ಲಿ ನೆಗಡಿ ಮತ್ತು ಕೆಮ್ಮಿಗೆ ಒಳ್ಳೆಯದು. ಏಲಕ್ಕಿಯನ್ನು ಬಿಸಿನೀರಿನಲ್ಲಿ ಹಾಕಿ ಕುಡಿಯುವುದರಿಂದ ಕಫ ಸಮಸ್ಯೆ ನಿವಾರಣೆಯಾಗುತ್ತದೆ.
ಪುದೀನ: ಪುದೀನ ಎಲೆಗಳು ಕಫವನ್ನು ಕರಗಿಸಲು ಸಹಾಯ ಮಾಡುತ್ತದೆ. ಪುದೀನಾ ಎಲೆಗಳನ್ನು ಚೆನ್ನಾಗಿ ತೊಳೆದು ನೀರಿನಲ್ಲಿ ಕುದಿಸಿ ಅದಕ್ಕೆ ನಿಂಬೆರಸ ಸೇರಿಸಿ ಕುಡಿಯಿರಿ.
ಇದನ್ನೂ ಓದಿ: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಬಿಳಿ ಕಾಳುಗಳು ನಿಮ್ಮ ಆಹಾರದಲ್ಲಿರಲಿ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.