ಬೆಂಗಳೂರು: ಪಪ್ಪಾಯ ಅಂದರೆ ಪರಂಗಿ ಹಣ್ಣು ಸೇವಿಸುವುದರಿಂದ ಮನುಷ್ಯನ ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶ ದೊರೆಯುತ್ತದೆ. ಪಪ್ಪಾಯ ಹಣ್ಣು ಉಪಯೋಗಿಸಿದರೆ ಮನುಷ್ಯನ ಚರ್ಮದ ಸೌಂದರ್ಯ ಹೆಚ್ಚಿಸಿಕೊಳ್ಳುತ್ತದೆ. ಇದರ ಸೇವನೆಯಿಂದ ಹೆಚ್ಚಿನ ಜೀವಸತ್ವ ಮತ್ತು ಖನಿಜಾಂಶಗಳನ್ನು ಹೊಂದಬಹುದು. ಅಲ್ಲದೇ ಕ್ಯಾನ್ಸರ್, ಅಸ್ತಮಾ, ಮಧುಮೇಹ ರೋಗ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. 


COMMERCIAL BREAK
SCROLL TO CONTINUE READING

ಇದರಲ್ಲಿರುವ ಪೋಟ್ಯಾಷಿಯಂ ಅಂಶದಿಂದಾಗಿ ಸಂಧಿವಾತ ರೋಗ ನಿವಾರಣೆಗೆ ಸಹಕಾರಿ. ಉತ್ತಮ ಜೀರ್ಣ ಶಕ್ತಿಯನ್ನು ಮತ್ತು ಹೃದಯ ರೋಗಗಳನ್ನು ನಿವಾರಿಸುವಲ್ಲಿ ತುಂಬಾ ಸಹಕಾರಿಯಾಗಿದೆ.


ಇದರಲ್ಲಿರುವ “ಇ” ವಿಟಮಿನ್ ಸೌಂದರ್ಯ ವರ್ಧಕ ಅಂಶ ಹೊಂದಿದ್ದು, ಚರ್ಮದ ಕಾಂತಿಗೆ ಮತ್ತು ಕೂದಲಿನ ಆರೋಗ್ಯಕ್ಕೂ ತುಂಬಾ ಸಹಕಾರಿಯಾಗಿದೆ.


ಒಂದು ಮಧ್ಯಮ ಗಾತ್ರದ ಪಪ್ಪಾಯ ಹಣ್ಣಿನಲ್ಲಿ 68 ಕ್ಯಾಲೋರಿಗಳು ಇರುತ್ತದೆ. ಜಿಂಕ್ 0.13 ಮಿ.ಗ್ರಾಂ., ಕ್ಯಾಲ್ಸಿಯಂ 31 ಮಿ.ಗ್ರಾಂ., ಮ್ಯಾಗ್ನಿಷಿಯಂ 33 ಮಿ.ಗ್ರಾಂ., ಪೋಟ್ಯಾಷಿಯಂ 286 ಮಿ.ಗ್ರಾಂ., ಕಾರ್ಬೋಹೈಡ್ರೇಟ್ 50.1 ಗ್ರಾಂ., ನಾರು 2.7 ಗ್ರಾಂ., ಪ್ರೋಟಿನ್ 2.9 ಗ್ರಾಂ., ಸಕ್ಕರೆ 8.30 ಗ್ರಾಂ., ಓಮೆಗಾ 3 ಕೊಬ್ಬಿನ ಆಮ್ಲಗಳು-35.0 ಮಿ.ಗ್ರಾಂ. ಪೋಷಕಾಂಶಗಳು ಲಭ್ಯವಿರುತ್ತವೆ. ಪಪ್ಪಾಯ ಹಣ್ಣು ಸೇವನೆಯಿಂದ ಮನುಷ್ಯನ ಶರೀರಕ್ಕೆ ಈ ಮೇಲಿನ ಎಲ್ಲಾ ಲಾಭಾಂಶಗಳು ದೊರೆಯುತ್ತವೆ.