ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ನಾರ್ಮಲ್ ಆಗಬೇಕೆ? ಈ ತರಕಾರಿಗಳನ್ನು ಸೇವಿಸಿ, ಹೃದಯದ ಆರೋಗ್ಯಕ್ಕೂ ಒಳ್ಳೆಯದು !

Cholesterol control tips : ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಆಹಾರದ ಕಡೆಗೆ ವಿಶೇಷ ಗಮನ ನೀಡಬೇಕು.ಕೆಲವೊಂದು ತರಕಾರಿಗಳನ್ನು ಸೇವಿಸುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದು  ಸಾಧ್ಯವಾಗುತ್ತದೆ. 

Written by - Ranjitha R K | Last Updated : Mar 13, 2024, 11:44 AM IST
  • ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದರಿಂದ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
  • ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿರುವ ಮೇಣದಂತಹ ವಸ್ತುವಾಗಿದೆ.
  • ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್.
ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ನಾರ್ಮಲ್ ಆಗಬೇಕೆ? ಈ ತರಕಾರಿಗಳನ್ನು ಸೇವಿಸಿ, ಹೃದಯದ ಆರೋಗ್ಯಕ್ಕೂ ಒಳ್ಳೆಯದು ! title=

Cholesterol control tips : ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದರಿಂದ  ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿರುವ ಮೇಣದಂತಹ ವಸ್ತುವಾಗಿದೆ. ಕೊಲೆಸ್ಟ್ರಾಲ್  ನಲ್ಲಿ ಎರಡು ವಿಧ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದಾಗ, ಅದು ರಕ್ತನಾಳಗಳಲ್ಲಿ ಸಂಗ್ರಹಗೊಳ್ಳಲು ಪ್ರಾರಂಭಿಸುತ್ತದೆ. ಈ ಕಾರಣದಿಂದಾಗಿ, ಅಧಿಕ ರಕ್ತದೊತ್ತಡ, ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಗಂಭೀರ ಕಾಯಿಲೆಗಳ ಅಪಾಯ ಕೂಡಾ ಹೆಚ್ಚಾಗುತ್ತದೆ.ಹೀಗಾಗಿ   ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಆಹಾರದ ಕಡೆಗೆ ವಿಶೇಷ ಗಮನ ನೀಡಬೇಕು.ಕೆಲವೊಂದು ತರಕಾರಿಗಳನ್ನು ಸೇವಿಸುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದು  ಸಾಧ್ಯವಾಗುತ್ತದೆ. 

1. ಬೆಂಡೆಕಾಯಿ :  
ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಬೆಂಡೆ ಕಾಯಿ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಕರಗುವ ಫೈಬರ್ ಅನ್ನು ಹೊಂದಿದ್ದು, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಕೂಡಾ ನೆರವಾಗುತ್ತದೆ. 

ಇದನ್ನೂ ಓದಿ : Benefits Of Apple Peel: ಸೇಬು ಹಣ್ಣು ತಿಂದು ನೀವೂ ಅದರ ಸಿಪ್ಪೆ ಎಸೆಯುತ್ತೀರಾ? ಹಾಗಾದ್ರೆ ಲೇಖನ ತಪ್ಪದೆ ಓದಿ!

2. ಬೆಳ್ಳುಳ್ಳಿ : 
ಬೆಳ್ಳುಳ್ಳಿಯ ಸೇವನೆಯು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಬಹಳ ಪ್ರಯೋಜನಕಾರಿ.  ಇದು ಹೈಪರ್ಲಿಪಿಡೆಮಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದೇಹದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 1 ರಿಂದ 2 ಎಸಳು ಬೆಳ್ಳುಳ್ಳಿಯನ್ನು ಅಗಿದು ತಿನ್ನಬೇಕು. 

3. ಬೀನ್ಸ್  :
ಬೀನ್ಸ್ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಜೀವಸತ್ವಗಳು, ಫೈಬರ್, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಇದರಲ್ಲಿ ಹೇರಳವಾಗಿ ಇರುತ್ತವೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದನ್ನು ತಿನ್ನುವುದರಿಂದ ದೇಹದಲ್ಲಿನ ರಕ್ತನಾಳಗಳು ಬಲಗೊಳ್ಳುತ್ತವೆ.

4. ಬದನೆ : 
ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಬದನೆಕಾಯಿಯನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಇದು ತುಂಬಾ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಫೈಬರ್ ನಲ್ಲಿ ಸಮೃದ್ಧವಾಗಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ : ಎಳನೀರಿಗೆ ಈ ಬೀಜ ಸೇರಿಸಿ ಕುಡಿಯಿರಿ… ಕರಗಿಸಲು ಕಠಿಣವೆನಿಸುವ ಸೊಂಟದ ಹಠಮಾರಿ ಬೊಜ್ಜು ಸುಲಭವಾಗಿ ಕರಗುತ್ತೆ

5. ಪಾಲಕ್ ಸೊಪ್ಪು : 
ಪಾಲಕ್ ಸೊಪ್ಪು ಒಂದು ಆರೋಗ್ಯಕರ ತರಕಾರಿ. ಇದು ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳಲ್ಲಿ ಸಮೃದ್ಧವಾಗಿದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News