Hair care tipis : ಉದ್ದ, ಕಪ್ಪು ಮತ್ತು ರೇಷ್ಮೆಯಂತಹ ಕೂದಲು ವ್ಯಕ್ತಿತ್ವಕ್ಕೆ ಸೌಂದರ್ಯವನ್ನು ನೀಡುತ್ತದೆ. ಕೂದಲು ಹಾನಿಗೊಳಗಾಗಿದ್ದರೆ, ಅದು ವ್ಯಕ್ತಿತ್ವದ ಮೇಲೂ ಪರಿಣಾಮ ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ತಮ್ಮ ಬ್ಯುಸಿ ಶೆಡ್ಯೂಲ್ಗಳಿಂದಾಗಿ ಕೂದಲಿನ ಆರೈಕೆಯ ಬಗ್ಗೆ ಹೆಚ್ಚು ಗಮನ ಹರಿಸುತ್ತಿಲ್ಲ. ಇದರಿಂದ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅವರು ಅನುಭವಿಸುತ್ತಿದ್ದಾರೆ. ವಿಟಮಿನ್ ಇ ಇಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಇ ನೈಸರ್ಗಿಕ ಉತ್ಕರ್ಷಣ ನಿರೋಧಕವಾಗಿದ್ದು ಅದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.. ಸಂಶೋಧನೆಯ ಪ್ರಕಾರ ವಿಟಮಿನ್ ಇ ಕೂದಲು ಉದುರುವುದನ್ನು ತಡೆಯುತ್ತದೆ ಎಂದು ತಿಳಿದು ಬಂದಿದೆ.. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚಾಗುತ್ತದೆ. ಅಲ್ಲದೆ, ವಿಟಮಿನ್ ಇ ಎಣ್ಣೆಯನ್ನು ಸಹ ಕೂದಲಿಗೆ ಬಳಸಬಹುದು.
ಇದನ್ನೂ ಓದಿ: ಬ್ಲ್ಯಾಕ್ ಗೌನ್ನಲ್ಲಿ ಹಾಟ್ ನಾಗಿಣಿ: ಬರ್ತ್ಡೇ ಸೆಲೆಬ್ರೇಷನ್ನಲ್ಲಿ ಬಿಗ್ ಬಾಸ್ ಬೆಡಗಿ!
ವಿಟಮಿನ್ ಇ ಎಣ್ಣೆಯಿಂದ ತಲೆಗೆ ಮಸಾಜ್ ಮಾಡುವುದರಿಂದ ರಕ್ತ ಸಂಚಾರ ಹೆಚ್ಚುತ್ತದೆ ಮತ್ತು ಕೂದಲಿಗೆ ಅಗತ್ಯವಾದ ಪೋಷಣೆ ದೊರೆಯುತ್ತದೆ. ಉತ್ತಮ ಮತ್ತು ತಕ್ಷಣದ ಫಲಿತಾಂಶಗಳಿಗಾಗಿ, ತಲೆ ಸ್ನಾನ ಮಾಡುವ 30 ನಿಮಿಷಗಳ ಮೊದಲು ವಿಟಮಿನ್ ಇ ಎಣ್ಣೆಯಿಂದ ಕೂದಲನ್ನು ಮಸಾಜ್ ಮಾಡಿ. ವಿಟಮಿನ್ ಇ ಶಾಂಪೂಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ.
ವಿಟಮಿನ್ ಇ ಎಣ್ಣೆಯನ್ನು ಬಳಸುವುದರ ಜೊತೆಗೆ, ನೀವು ಅದನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ವಿಟಮಿನ್ ಇ ಗಾಗಿ ಒಣ ಹಣ್ಣುಗಳಾದ ವಾಲ್ ನಟ್ಸ್, ಬಾದಾಮಿಗಳನ್ನು ಸೇವಿಸಬಹುದು. ಈ ಎರಡೂ ವಸ್ತುಗಳು ವಿಟಮಿನ್ ಇ ಯಲ್ಲಿ ಸಮೃದ್ಧವಾಗಿವೆ.
(ನಿರಾಕರಣೆ: ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಅದನ್ನು ಅನುಮೋದಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.