ವಾಲ್ ನಟ್ಸ್.. ತೂಕ ಇಳಿಕೆಗೆ ಪ್ರತಿನಿತ್ಯ ಮುಂಜಾನೆ ಹೀಗೆ ಸೇವಿಸಿ
Walnuts Benefits: ಪ್ರತಿದಿನ ಬೆಳಗ್ಗೆ ವಾಲ್ ನಟ್ಸ್ ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ.
Walnuts Benefits: ಪ್ರತಿದಿನ ವಾಲ್ ನಟ್ಸ್ ಸೇವಿಸುವುದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡತ್ತದೆ. ಮಾನವನ ಮಿದುಳಿನಂತೆಯೇ ವಾಲ್ ನಟ್ ಕಾಣುತ್ತದೆ. ಇದರ ಸೇವನೆಯಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದು ದೇಹಕ್ಕೆ ಅಗತ್ಯವಿರುವ ಹಲವಾರು ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಆದ್ದರಿಂದ ವಾಲ್‌ನಟ್‌ಗಳನ್ನು ದಿನನಿತ್ಯದ ಆಹಾರದಲ್ಲಿ ತೆಗೆದುಕೊಂಡರೆ ಗಂಭೀರ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಬಹಳ ಸಹಾಯಕವಾಗಿದೆ.
ವಾಲ್ ನಟ್ಸ್ ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ತಾಮ್ರ, ಸೆಲೆನಿಯಮ್ ಮತ್ತು ಒಮೆಗಾ 3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿದೆ. ದೇಹವು ನಮ್ಮ ಮೆದುಳಿಗೆ ಅಗತ್ಯವಿರುವ ಸಾಕಷ್ಟು ಆರೋಗ್ಯಕರ ಕೊಬ್ಬನ್ನು ಸಹ ಪಡೆಯುತ್ತದೆ. ಹಾಗಾಗಿ ಪ್ರತಿದಿನ ವಾಲ್ ನಟ್ಸ್ ಸೇವಿಸುವುದರಿಂದ ಮೆದುಳಿನ ಕಾರ್ಯ ಸುಧಾರಿಸುತ್ತದೆ. ವಿಶೇಷವಾಗಿ ಮಕ್ಕಳಲ್ಲಿ ಜ್ಞಾಪಕಶಕ್ತಿಯನ್ನು ಸುಧಾರಿಸಲು ಅವು ಬಹಳ ಸಹಾಯಕವಾಗಿವೆ. ಈ ವಾಲ್‌ನಟ್ಸ್‌ನಲ್ಲಿರುವ ಗುಣಗಳು ಆಲೋಚನಾ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹ ಬಹಳ ಸಹಾಯಕವಾಗಿದೆ.
ಇದನ್ನೂ ಓದಿ : ತುಳಸಿ ನೀರು ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ
ಇದಲ್ಲದೇ ಪ್ರತಿದಿನ ವಾಲ್‌ನಟ್ಸ್ ತಿನ್ನುವುದರಿಂದ ಮೆದುಳಿನ ಎಲ್ಲಾ ಜೀವಕೋಶಗಳು ಕ್ರಿಯಾಶೀಲವಾಗುವುದಲ್ಲದೆ ಬುದ್ಧಿಮಾಂದ್ಯತೆ ಮತ್ತು ಆಲ್ಝೈಮರ್ ಕಾಯಿಲೆಗಳಿಂದ ರಕ್ಷಿಸುತ್ತದೆ. ಇದು ದೇಹಕ್ಕೆ ಅಗತ್ಯವಿರುವ ಹೆಚ್ಚಿನ ಪ್ರಮಾಣದ ಒಮೆಗಾ 3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ಆದ್ದರಿಂದ ಇದನ್ನು ಸೇವಿಸುವುದರಿಂದ ಹೃದಯದ ಕಾರ್ಯವೂ ಸುಧಾರಿಸುತ್ತದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸಹ ನಿಯಂತ್ರಿಸುತ್ತದೆ. ಪದೇ ಪದೇ ಹೃದಯ ಸಮಸ್ಯೆಯಿಂದ ಬಳಲುತ್ತಿರುವವರು ಇವುಗಳನ್ನು ತಪ್ಪದೇ ಸೇವಿಸಬೇಕು.
ವಾಲ್‌ನಟ್ ನಲ್ಲಿ ಆ್ಯಂಟಿಆಕ್ಸಿಡೆಂಟ್ ಕೂಡ ಅಧಿಕವಾಗಿದೆ. ಆದ್ದರಿಂದ ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳಿಂದ ರಕ್ಷಿಸುತ್ತದೆ. ಇದಲ್ಲದೇ ಕ್ಯಾನ್ಸರ್ ನಂತಹ ಅಪಾಯಕಾರಿ ಕಾಯಿಲೆಗಳನ್ನು ಸುಲಭವಾಗಿ ಕಡಿಮೆ ಮಾಡಲು ವಾಲ್‌ನಟ್ಸ್ ನೆರವಾಗುತ್ತದೆ. ದೇಹದ ತೂಕವನ್ನು ನಿಯಂತ್ರಿಸುವಲ್ಲಿ ವಾಲ್‌ನಟ್ಸ್ ಪರಿಣಾಮಕಾರಿ. ತೂಕ ಇಳಿಸಿಕೊಳ್ಳಲು ಬಯಸುವವರು ಪ್ರತಿದಿನ ಬೆಳಗ್ಗೆ ನೀರಿನಲ್ಲಿ ನೆನೆಸಿದ ವಾಲ್‌ನಟ್ಸ್ ಸೇವಿಸಬೇಕು. ಇದು ಹೆಚ್ಚಿನ ಪೊಟ್ಯಾಸಿಯಮ್ ಮಟ್ಟವನ್ನು ಸಹ ಹೊಂದಿದೆ. ಅಧಿಕ ರಕ್ತದೊತ್ತಡ ಹೊಂದಿರುವ ಜನರು ಇದನ್ನು ಸೇವಿಸುವುದರಿಂದ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ.
ಇದನ್ನೂ ಓದಿ : ಗ್ಯಾಸ್ಟ್ರಿಕ್ ಸಮಸ್ಯೆಗೆ ಶುಂಠಿಯಲ್ಲಿದೆ ಪರಿಹಾರ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.