Warm Water For Health: ಆಯುರ್ವೇದದ ಪ್ರಕಾರ, ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ದೇಹ ತಾಜಾತನವನ್ನು ಅನುಭವಿಸುತ್ತದೆ. ಜೊತೆಗೆ ಇದು ನಮ್ಮನ್ನು ಹಲವು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯುವಂತೆ ಮಾಡುತ್ತದೆ. ಪ್ರತಿದಿನ ಬೆಳಿಗ್ಗೆ ಒಂದೇ ಒಂದು ಗ್ಲಾಸ್ ಬೆಚ್ಚಗಿನ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂದು ನೋಡುವುದಾದರೆ...
ರೋಗ ನಿರೋಧಕ ಶಕ್ತಿ:
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರು ಕುಡಿಯುವುದೈರ್ಣ್ಡ ದೇಹದ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಇದು ದೇಹದಿಂದ ವಿಷಕಾರಿ ವಸ್ತುಗಳನ್ನು ತೆಗೆದುಹಾಕಲು ಸಹಾಯಕವಾಗಿದೆ. ಜೊತೆಗೆ ದೇಹದಲ್ಲಿ ಸೋಂಕು ಉಂಟುಮಾಡುವ ಬ್ಯಾಕ್ಟೀರಿಯಾ, ವೈರಸ್ ಅನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿ ಆಗಿದೆ.
ಚಯಾಪಚಯ ಕ್ರಿಯೆ ಹೆಚ್ಚಳ:
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಸುಧಾರಿಸುತ್ತದೆ. ಇದರಿಂದಾಗಿ ಮಲಬದ್ಧತೆ, ಅಜೀರ್ಣತೆ, ಆಮ್ಲೀಯತೆಯಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
ಇದನ್ನೂ ಓದಿ- ಮಧುಮೇಹಿಗಳಿಗೆ ದೇಹದ ಈ ಭಾಗದಲ್ಲಿ ನೋವು ಕಾಣಿಸಿಕೊಂಡ್ರೆ ಎಚ್ಚರ! ಅಪಾಯದ ಮುನ್ಸೂಚನೆ ಇದು
ತೂಕ ಇಳಿಕೆ:
ತೂಕ ಇಳಿಕೆಗಾಗಿ ಪ್ರಯತ್ನಿಸುತ್ತಿರುವವರು ನಿತ್ಯ ಬೆಳಿಗ್ಗೆ ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ಕೆಲವೇ ದಿನಗಳಲ್ಲಿ ಸುಲಭವಾಗಿ ತೂಕ ಇಳಿಕೆ ಆಗುತ್ತದೆ.
ಕರುಳಿನ ಆರೋಗ್ಯ:
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ಕರುಳು ಶುದ್ಧೀಕರಿಸಲು ಸಹಾಯಕವಾಗಿದೆ. ಇದರಿಂದ ಕರುಳಿನ ಆರೋಗ್ಯ ಸುಧಾರಿಸುತ್ತದೆ.
ಇದನ್ನೂ ಓದಿ- ಬೊಜ್ಜು ಕಡಿಮೆ ಮಾಡಲು ನಿಮ್ಮ ಆಹಾರಕ್ರಮ ಹೇಗಿರಬೇಕು? ಆರೋಗ್ಯ ತಜ್ಞರು ಹೇಳುವುದೇನು?
ಖಿನ್ನತೆ, ಆತಂಕ:
ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ರೂಢಿಸಿಕೊಂಡರೆ ದೇಹದಲ್ಲಿ ರಕ್ತಪರಿಚಲನೆ ಸುಧಾರಣೆಗೊಂಡು, ನರಗಳಿಗೆ ವಿಶ್ರಾಂತಿ ದೊರೆತು ಮನಸ್ಸಿನ ಆತಂಕ ಕಡಿಮೆಯಾಗುತ್ತದೆ.
ಚರ್ಮ ಮತ್ತು ಕೂದಲಿನ ಆರೋಗ್ಯ:
ನಿತ್ಯ ಬೆಳಿಗ್ಗೆ ಉಗುರು ಬೆಚ್ಚಗಿನ ನೀರಿನಿಂದ ದಿನವನು ಆರಂಭಿಸಿದರೆ ನೈಸರ್ಗಿಕವಾಗಿ ಚರ್ಮಕ್ಕೆ ಹೊಳಪು ದೊರೆಯುತ್ತದೆ. ಜೊತೆಗೆ ಆರೋಗ್ಯಕರ ಕೂದಲಿಗೂ ಪ್ರಯೋಜನಕಾರಿ ಆಗಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









