ಹೃದಯದ ರಕ್ತನಾಳ ಬ್ಲಾಕ್ ಆಗಿದೆ ಎನ್ನುವುದನ್ನು ಸೂಚಿಸುತ್ತವೆ ಈ ಲಕ್ಷಣಗಳು !ಹಾರ್ಟ್ ಅಟ್ಯಾಕ್ ಗೂ ಮುನ್ನ ಎಚ್ಚೆತ್ತುಕೊಳ್ಳಿ !

Symptoms Of Veins Blockage: ರಕ್ತನಾಳಗಳಲ್ಲಿ ಬ್ಲಾಕೇಜ್ ಎಂದರೆ ರಕ್ತನಾಳಗಳಲ್ಲಿ ರಕ್ತದ ಹರಿವಿಗೆ ಅಡಚಣೆ ಉಂಟಾಗುತ್ತದೆ. ಇದರಿಂದಾಗಿ ಅಗತ್ಯ ಪೋಷಕಾಂಶಗಳು ಮತ್ತು ಆಮ್ಲಜನಕವು ಅಂಗಗಳು ಮತ್ತು ಅಂಗಾಂಶಗಳನ್ನು ತಲುಪಲು ಸಾಧ್ಯವಾಗುವುದಿಲ್ಲ. ರಕ್ತನಾಳಗಳು ಮುಚ್ಚಿಹೋಗಲು ಹಲವು ಕಾರಣಗಳಿರಬಹುದು.

Written by - Ranjitha R K | Last Updated : Mar 28, 2025, 03:47 PM IST
  • ರಕ್ತನಾಳಗಳು ನಮ್ಮ ದೇಹದಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ.
  • ರಕ್ತನಾಳಗಳು ನಮ್ಮ ದೇಹದಾದ್ಯಂತ ಹರಡಿಕೊಂಡಿವೆ.
  • ವಿವಿಧ ಭಾಗಗಳಿಗೆ ರಕ್ತ ಮತ್ತು ಅಗತ್ಯ ಪೋಷಕಾಂಶಗಳನ್ನು ಪೂರೈಸುವ ಕೆಲಸ ಮಾಡುತ್ತವೆ.
ಹೃದಯದ ರಕ್ತನಾಳ ಬ್ಲಾಕ್ ಆಗಿದೆ ಎನ್ನುವುದನ್ನು ಸೂಚಿಸುತ್ತವೆ  ಈ ಲಕ್ಷಣಗಳು !ಹಾರ್ಟ್ ಅಟ್ಯಾಕ್ ಗೂ ಮುನ್ನ ಎಚ್ಚೆತ್ತುಕೊಳ್ಳಿ !

Symptoms Of Veins Blockage : ರಕ್ತನಾಳಗಳು ನಮ್ಮ ದೇಹದಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ರಕ್ತನಾಳಗಳು ನಮ್ಮ ದೇಹದಾದ್ಯಂತ ಹರಡಿಕೊಂಡಿವೆ. ಅವು ದೇಹದ ವಿವಿಧ ಭಾಗಗಳಿಗೆ ರಕ್ತ ಮತ್ತು ಅಗತ್ಯ ಪೋಷಕಾಂಶಗಳನ್ನು ಪೂರೈಸುವ ಕೆಲಸ ಮಾಡುತ್ತವೆ. ಇದೇ ಕಾರಣಕ್ಕೆ ನರಗಳು ನಮ್ಮ ದೇಹಕ್ಕೆ ಬಹಳ ಮುಖ್ಯ. ದೇಹದಲ್ಲಿ ರಕ್ತನಾಳಗಳಲ್ಲಿ  ಬ್ಲಾಕೇಜ್ ಉಂಟಾಗುವುದರಿಂದ ಹಲವು ರೀತಿಯ ಸಮಸ್ಯೆಗಳು ಉಂಟಾಗಬಹುದು. ರಕ್ತನಾಳಗಳಲ್ಲಿ ಬ್ಲಾಕೇಜ್ ಎಂದರೆ ರಕ್ತನಾಳಗಳಲ್ಲಿ ರಕ್ತದ ಹರಿವಿಗೆ ಅಡಚಣೆ ಉಂಟಾಗುತ್ತದೆ. ಇದರಿಂದಾಗಿ ಅಗತ್ಯ ಪೋಷಕಾಂಶಗಳು ಮತ್ತು ಆಮ್ಲಜನಕವು ಅಂಗಗಳು ಮತ್ತು ಅಂಗಾಂಶಗಳನ್ನು ತಲುಪಲು ಸಾಧ್ಯವಾಗುವುದಿಲ್ಲ. ರಕ್ತನಾಳಗಳು ಮುಚ್ಚಿಹೋಗಲು ಹಲವು ಕಾರಣಗಳಿರಬಹುದು. ಈ ಪೈಕಿ    ಕಳಪೆ ಜೀವನಶೈಲಿ, ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್, ಬೊಜ್ಜು, ಧೂಮಪಾನ ಮತ್ತು ವ್ಯಾಯಾಮದ ಕೊರತೆ ಸೇರಿವೆ. ರಕ್ತನಾಳಗಳಲ್ಲಿ ಬ್ಲಾಕೆಜ್ ಉಂಟಾದಾಗ, ದೇಹದಲ್ಲಿ ಅನೇಕ ರೀತಿಯ ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. 

Add Zee News as a Preferred Source

ರಕ್ತನಾಳಗಳಲ್ಲಿ ಬ್ಲಾಕೆಜ್ ಉಂಟಾದಾಗ ಕಾಣಿಸಿಕೊಳ್ಳುವ ಲಕ್ಷಣಗಳು : 
ಎದೆ ನೋವು:

ರಕ್ತನಾಳಗಳು ನಿರ್ಬಂಧಿಸಲ್ಪಟ್ಟಾಗ, ಎದೆಯಲ್ಲಿ ನೋವು ಮತ್ತು ಎದೆ ಭಾರವಾಗುವ ಅನುಭವವಾಗಬಹುದು. ಹೀಗಾಗುವಾಗ ಹೃದಯಕ್ಕೆ ಆಮ್ಲಜನಕವನ್ನು ತಲುಪುವಲ್ಲಿ ತೊಂದರೆ ಉಂಟಾಗುತ್ತದೆ. ಇದು ಎದೆಯ ಮಧ್ಯದಲ್ಲಿ ನೋವನ್ನು ಉಂಟುಮಾಡಬಹುದು. ಈ ನೋವು ಸೌಮ್ಯದಿಂದ ತೀವ್ರವಾಗಿರಬಹುದು. ನಿಮಗೂ ಈ ರೀತಿ ಅನಿಸಿದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಇದನ್ನೂ ಓದಿ : ಊಟದ ನಂತರ ಒಂದು ತುಂಡು ಸೇವಿಸಿದರೆ ಸಾಕು ಬ್ಲಡ್ ಶುಗರ್ ನಾರ್ಮಲ್ ಆಗಿಯೇ ಉಳಿಯುವುದು !ಬೇಸಿಗೆಯಲ್ಲಿ ಮಾತ್ರ ಸಿಗುವ ಈ ಹಣ್ಣು ಬಿಪಿಗೂ ಪರಿಹಾರ

ಉಸಿರಾಟದ ತೊಂದರೆ:
ರಕ್ತನಾಳಗಳಲ್ಲಿ ಬ್ಲಾಕೇಜ್ ಉಂಟಾಗುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತದೆ. ಬ್ಲಾಕೆಜ್ ನಿಂದಾಗಿ ಪೂರ್ಣ ಆಮ್ಲಜನಕ ದೇಹವನ್ನು ತಲುಪಲು ಸಾಧ್ಯವಾಗುವುದಿಲ್ಲ, ಇದರಿಂದಾಗಿ ಉಸಿರಾಟದ ತೊಂದರೆಗಳು ಉಂಟಾಗುತ್ತವೆ. ಕೆಲವು ದೈಹಿಕ ಚಟುವಟಿಕೆಗಳನ್ನು ಮಾಡಿದಾಗ ಅದು ಹೆಚ್ಚು ಅನುಭವಕ್ಕೆ ಬರಲು ಪ್ರಾರಂಭಿಸುತ್ತದೆ.

ಆಯಾಸ ಮತ್ತು ದೌರ್ಬಲ್ಯ:
ಯಾವುದೇ ಕೆಲಸ ಮಾಡದೆಯೂ ಅತಿಯಾದ ಆಯಾಸ ಮತ್ತು ದೌರ್ಬಲ್ಯ ಅನಿಸಿದರೆ, ಅದು ನರಗಳ ಬ್ಲಾಕೇಜ್ ಸಂಕೇತವೂ ಆಗಿರಬಹುದು. ರಕ್ತನಾಳಗಳಲ್ಲಿ ಬ್ಲಾಕೇಜ್ ಉಂಟಾಗುವುದರಿಂದ, ರಕ್ತವನ್ನು ಪಂಪ್ ಮಾಡಲು ಹೆಚ್ಚಿನ ಶ್ರಮ ಬೇಕಾಗುತ್ತದೆ.ಇದರಿಂದಾಗಿ  ಪದೇ ಪದೇ ದಣಿದ ಮತ್ತು ದುರ್ಬಲತೆಯನ್ನು ಅನುಭವಿಸಬಹುದು. 

ಇದನ್ನೂ ಓದಿ : ಯೂರಿಕ್‌ ಆಸಿಡ್‌ ಏಕಾಏಕಿ ಹೆಚ್ಚಳಕ್ಕೆ ಕಾರಣವಾಗುತ್ತೆ ಈ ಹಸಿರು ತರಕಾರಿ! ಕಿಡ್ನಿ ಸ್ಟೋನ್‌ ಉಂಟಾಗುವುದು ಇದರಿಂದಲೇ..

ತಲೆತಿರುಗುವುದು :
ರಕ್ತನಾಳಗಳಲ್ಲಿ ಬ್ಲಾಕೇಜ್ ಇದ್ದರೆ, ತಲೆ ಸುತ್ತುವುದು ಅಥವಾ ಮೂರ್ಛೆ ಹೋಗಬಹುದು. ಬ್ಲಾಕೇಜ್ ಉಂಟಾದಾಗ, ಆಮ್ಲಜನಕವು ಮೆದುಳನ್ನು ತಲುಪಲು ಸಾಧ್ಯವಾಗುವುದಿಲ್ಲ. ಇದು ತಲೆತಿರುಗುವಿಕೆ ಅಥವಾ ಪ್ರಜ್ಞೆ ಕಳೆದುಕೊಳ್ಳಲು ಕಾರಣವಾಗಬಹುದು. ನಿಮಗೆ ಇದು ಪದೇ ಪದೇ ಅನಿಸಿದರೆ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

(ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದಿನ ಆಧಾರದಲ್ಲಿ ಬರೆಯಲಾಗಿದೆ. ಇದನ್ನು ಜೀ ನ್ಯೂಸ್ ಅನುಮೋದಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News