Water After Food: ಆಹಾರ ಸೇವನೆ ಬಳಿಕ ತಕ್ಷಣ ನೀರು ಕುಡಿಯುವ ಅಭ್ಯಾಸ ನಿಮಗೂ ಇದೆಯೇ? ಇದನ್ನು ತಪ್ಪದೇ ಓದಿ

ಬೇಸಿಗೆಯಲ್ಲಿ, ನಮಗೆ ಹೆಚ್ಚು ಬಾಯಾರಿಕೆಯಾಗುತ್ತದೆ, ಆದ್ದರಿಂದ ನಾವು ಹೆಚ್ಚು ನೀರು ಕುಡಿಯುತ್ತೇವೆ. ಆದರೆ ಅನೇಕ ಬಾರಿ ತಪ್ಪಾದ ಸಮಯದಲ್ಲಿ ನೀರು ಕುಡಿಯುವುದರಿಂದ ಪ್ರಯೋಜನದ ಬದಲು ಹಾನಿ ಉಂಟಾಗುತ್ತದೆ. 

Written by - Yashaswini V | Last Updated : Apr 12, 2022, 12:53 PM IST
  • ಊಟ-ತಿಂಡಿ ತಿಂದ ತಕ್ಷಣ ನೀರು ಕುಡಿಯಬಾರದು
  • ಇದರಿಂದ ಆರೋಗ್ಯಕ್ಕೆ ಅನೇಕ ಹಾನಿಗಳು ಉಂಟಾಗುತ್ತವೆ
  • ದೇಹದಲ್ಲಿ ಕೊಬ್ಬು ಕೂಡ ಹೆಚ್ಚಾಗುತ್ತದೆ
Water After Food: ಆಹಾರ ಸೇವನೆ ಬಳಿಕ ತಕ್ಷಣ ನೀರು ಕುಡಿಯುವ ಅಭ್ಯಾಸ ನಿಮಗೂ ಇದೆಯೇ? ಇದನ್ನು ತಪ್ಪದೇ ಓದಿ  title=
Advantages and disadvantages of water after meal

ಬೆಂಗಳೂರು: ನಮ್ಮ ಆರೋಗ್ಯಕ್ಕೆ ನೀರು ಬಹಳ ಮುಖ್ಯ. ಈ ಕಾರಣಕ್ಕಾಗಿಯೇ ಆರೋಗ್ಯ ತಜ್ಞರು ಪ್ರತಿದಿನ 3-4 ಲೀಟರ್ ನೀರು ಕುಡಿಯಲು ಶಿಫಾರಸು ಮಾಡುತ್ತಾರೆ. ವೈದ್ಯರ ಪ್ರಕಾರ, ಊಟ ಮಾಡುವಾಗ ನೀರು ಕುಡಿಯುವುದನ್ನು ತಪ್ಪಿಸಬೇಕು, ಊಟದ ಜೊತೆಗೆ ಅಥವಾ ಊಟ ಮಾಡಿದ ತಕ್ಷಣ ನೀರು ಕುಡಿಯುವುದರಿಂದ ಅಸಿಡಿಟಿ, ಹೊಟ್ಟೆ ಉಬ್ಬುವುದು ಮುಂತಾದ ಸಮಸ್ಯೆಗಳು ಉಂಟಾಗಬಹುದು. ಆಹಾರ ಸೇವಿಸಿದ ತಕ್ಷಣ ನೀರು ಕುಡಿಯುವ ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ.
 
ಆಹಾರ ತಿಂದ ಎಷ್ಟು ಸಮಯದ ನಂತರ ನೀರು ಕುಡಿಯಬೇಕು?
ಆಹಾರವನ್ನು ಜೀರ್ಣಿಸಿಕೊಳ್ಳಲು ಸುಮಾರು 2 ಗಂಟೆಗಳ ಕಾಲ ತೆಗೆದುಕೊಳ್ಳುತ್ತದೆ ಎಂದು ಆರೋಗ್ಯ ತಜ್ಞರು ನಂಬುತ್ತಾರೆ. ಅದೇ ಸಮಯದಲ್ಲಿ ನೀರು ಕುಡಿಯುವುದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಅದಕ್ಕಾಗಿಯೇ ಆಹಾರವನ್ನು ಸೇವಿಸಿದ 45-60 ನಿಮಿಷಗಳ ನಂತರ ನೀರನ್ನು ಕುಡಿಯಬೇಕು. ಆಹಾರ ಸೇವಿಸುವ ಅರ್ಧ ಗಂಟೆ ಮೊದಲು ನೀರನ್ನು ಕುಡಿಯಬೇಕು ಎಂಬುದನ್ನು ಸಹ ನೆನಪಿನಲ್ಲಿಡಿ. 

ಇದನ್ನೂ ಓದಿ- ವೇಗವಾಗಿ ತೂಕ ಇಳಿಸಲು ಈ ಮಸಾಲೆಯ ನೀರನ್ನು ಕುಡಿದು ನೋಡಿ

ಸರಿಯಾದ ಸಮಯಕ್ಕೆ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು :
1. ಆಹಾರ ಸೇವಿಸಿದ ಒಂದು ಗಂಟೆಯ ನಂತರ ನೀರು ಕುಡಿಯುವುದರಿಂದ ತೂಕ ನಿಯಂತ್ರಣದಲ್ಲಿರುತ್ತದೆ.
2. ಸರಿಯಾದ ಸಮಯಕ್ಕೆ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸರಿಯಾಗಿರುತ್ತದೆ, ಜೀರ್ಣಾಂಗ ವ್ಯವಸ್ಥೆಯು ಸದೃಢವಾಗಿರುತ್ತದೆ.
3. ಹೊಟ್ಟೆಯಲ್ಲಿ ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆ ಇರುವುದಿಲ್ಲ.
4. ದೇಹವು ಆಹಾರದಲ್ಲಿರುವ ಪೋಷಕಾಂಶಗಳನ್ನು ಚೆನ್ನಾಗಿ ಹೀರಿಕೊಳ್ಳುತ್ತದೆ.
5. ಸರಿಯಾದ ಸಮಯಕ್ಕೆ ನೀರು ಕುಡಿಯುವುದು ಉತ್ತಮ ನಿದ್ದೆಯನ್ನು ಪಡೆಯಲು ಕೂಡ ಸಹಾಯ ಮಾಡುತ್ತದೆ. 

ಇದನ್ನೂ ಓದಿ- ಬೇಸಿಗೆಯಲ್ಲಿ ತಿನ್ನಲೇಬೇಕು ದ್ರಾಕ್ಷಿ ಹಣ್ಣು, ಮಧುಮೇಹ ಸೇರಿದಂತೆ ಈ 5 ಸಮಸ್ಯೆಗಳಿಂದ ಸಿಗುತ್ತೆ ಪರಿಹಾರ

ಆಹಾರ ತಿಂದ ತಕ್ಷಣ ನೀರು ಕುಡಿಯುವುದರಿಂದ ಆಗುವ ಅನಾನುಕೂಲಗಳು :
ಆಹಾರ ಸೇವನೆ ತಕ್ಷಣ ನೀರು ಕುಡಿಯುವುದರಿಂದ ಈ ಕೆಳಗಿನ ಸಮಸ್ಯೆಗಳು ಉಂಟಾಗಬಹುದು...
>> ಸ್ಥೂಲಕಾಯ ಸಮಸ್ಯೆ 
>> ಜೀರ್ಣಕ್ರಿಯೆ ಸಮಸ್ಯೆ 
>> ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವ ಸಮಸ್ಯೆ
>> ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆಗಳು ಉಂಟಾಗಬಹುದು. 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳಿ. ZEE ಮೀಡಿಯಾ ಇದನ್ನು ದೃಢೀಕರಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News