ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದು ಬಹಳ ಪ್ರಯೋಜನಕಾರಿ.
ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿ ಕಂಡುಬರುತ್ತದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ನೆಲ್ಲಿಕಾಯಿಯಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಇರುತ್ತದೆ. ಇದನ್ನು ಸೇವಿಸುವುದರಿಂದ ಆಸಿಡಿಟಿ, ಮಲಬದ್ದತೆಯಿಂದ ಪರಿಹಾರ ಸಿಗುತ್ತದೆ.
ನೆಲ್ಲಿಕಾಯಿಯಲ್ಲಿ ಅಧಿಕ ಪ್ರಮಾಣದ ಕ್ಯಾಲ್ಷಿಯಂ ಅಡಗಿರುತ್ತದೆ. ಇದು ಮೂಳೆಗಳನ್ನು ಸದೃಢವಾಗಿಸಲು ಅತ್ಯಗತ್ಯ.
ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಸೇವನೆ ಸ್ನಾಯುಗಳಿಗೆ ಒಳ್ಳೆಯದು. ಇದರಲ್ಲಿ ಉತ್ತಮ ಪ್ರಮಾಣದ ಪೊಟ್ಯಾಷಿಯಂ ಕಂಡು ಬರುತ್ತದೆ.
ನೆಲ್ಲಿಕಾಯಿ ಚರ್ಮದ ಎಲ್ಲಾ ಕಲೆಗಳನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ. ಇದನ್ನು ನಿತ್ಯ ಸೇವಿಸುವುದರಿಂದ ತ್ವಚೆ ಸುಂದರವಾಗುವುದು.
ನೆಲ್ಲಿಕಾಯಿ ಜ್ಯೂಸ್ ಸೇವನೆಯಿಂದ ಕೂದಲು ಕಪ್ಪಾಗುವುದಲ್ಲದೆ ದಟ್ಟವಾಗಿ ಬೆಳೆಯುತ್ತದೆ.
ದಿನಾ ಬೆಳಿಗ್ಗೆ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮತ್ತ ನಿಯಂತ್ರಣದಲ್ಲಿ ಇರುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)