ಪ್ರತಿದಿನ ಒಂದು ಹಿಡಿ ಸೂರ್ಯಕಾಂತಿ ಬೀಜಗಳನ್ನು ಸಹ ಸೇವಿಸಿದರೆ ಇದರಲ್ಲಿರುವ ಪ್ರೋಟೀನ್, ಫೈಬರ್ ಮತ್ತು ವಿಟಮಿನ್ ಇ ನಂತಹ ಹೆಚ್ಚಿನ ಪ್ರಮಾಣದ ಪೌಷ್ಟಿಕಾಂಶದ ಅಂಶಗಳು ದೇಹಕ್ಕೆ ಸೇರಿಕೊಳ್ಳುತ್ತವೆ. ಈ ಮೂಲಕ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳನ್ನು ಸುಲಭವಾಗಿ ನಿಯಂತ್ರಿಸಬಹುದು.
ಸೂರ್ಯಕಾಂತಿ ಬೀಜಗಳನ್ನು ಸಾಮಾನ್ಯವಾಗಿ ಡ್ರೈ ಅಥವಾ ಹುರಿದು ತಿನ್ನಲಾಗುತ್ತದೆ.
ಸೂರ್ಯಕಾಂತಿ ಬೀಜಗಳು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿವೆ. ಹೀಗಾಗಿ ಇದನ್ನು ಸೇವಿಸುವುದರಿಂದ ಅಧಿಕ ಕೊಲೆಸ್ಟ್ರಾಲ್, ಅಧಿಕ ಬಿಪಿ ಮತ್ತು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು.
ಮಧುಮೇಹ ರೋಗಿಯು ಪ್ರತಿದಿನ ಒಂದು ಹಿಡಿ ಸೂರ್ಯಕಾಂತಿ ಬೀಜಗಳನ್ನು ಸೇವಿಸಬೇಕು. ಸೂರ್ಯಕಾಂತಿ ಬೀಜಗಳು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ ಎಂದು ಸಂಶೋಧನೆಯಲ್ಲಿ ತಿಳಿದುಬಂದಿದೆ.
ದೀರ್ಘಕಾಲದ ಉರಿಯೂತದಿಂದಾಗಿ, ವ್ಯಕ್ತಿಯು ಸಂಧಿವಾತ, ಕೀಲು ನೋವು ಇತ್ಯಾದಿ ಸಮಸ್ಯೆಗಳನ್ನು ಎದುರಿಸುತ್ತಿರಬಹುದು. ಇದಕ್ಕೆ ಪರಿಹಾರ ಪಡೆಯಲು ಉರಿಯೂತ ನಿವಾರಕ ಗುಣಗಳನ್ನು ನೀಡುವ ಸೂರ್ಯಕಾಂತಿ ಬೀಜಗಳನ್ನು ಸೇವಿಸಬಹುದು. ಸೂರ್ಯಕಾಂತಿ ಬೀಜಗಳು ವಿಟಮಿನ್ ಇ, ಫ್ಲೇವನಾಯ್ಡ್ಗಳು ಮತ್ತು ಇತರ ಅಂಶಗಳನ್ನು ಒಳಗೊಂಡಿರುತ್ತವೆ.
ವ್ಯಕ್ತಿಯ ಪ್ರತಿರಕ್ಷಣಾ ವ್ಯವಸ್ಥೆಯು ದುರ್ಬಲವಾಗಿದ್ದರೆ ಆಗಾಗ್ಗೆ ಶೀತ ಮತ್ತು ಕೆಮ್ಮಿನಂತಹ ಸಮಸ್ಯೆಗಳು ವಕ್ಕರಿಸಿಕೊಳ್ಳುತ್ತವೆ. ಅಂತಹ ಪರಿಸ್ಥಿತಿಯಲ್ಲಿ ನೀವು ಸೂರ್ಯಕಾಂತಿ ಬೀಜಗಳನ್ನು ಸೇವಿಸಬೇಕು. ಇದರಲ್ಲಿರುವ ಸತು, ಸೆಲೆನಿಯಮ್ ಮತ್ತು ಇತರ ಪೋಷಕಾಂಶಗಳು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಸೋಂಕು ಇತ್ಯಾದಿಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. Zee Kannada News ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.