ಚಳಿಗಾಲದಲ್ಲಿ ಬೀಟ್‌ರೂಟ್ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಾಗುವುದು.
ಅನೇಕ ವಿಟಮಿನ್‌ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದರಲ್ಲಿರುವ ಬೀಟಾಲೈನ್‌ಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ.
ಬೀಟ್ರೂಟ್ ನ ದೈನಂದಿನ ಸೇವನೆಯು ದೇಹದ ತೂಕ ಹೆಚ್ಚಳವಾಗುವುದನ್ನು ಕಡಿಮೆ ಮಾಡುತ್ತದೆ. ಅದರಲ್ಲೂ ಬೀಟ್ರೂಟ್ ಜ್ಯೂಸ್ ವ್ಯಾಯಾಮದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.
ಬೀಟ್ರೂಟ್ ರಸವು ಹೆಚ್ಚಿನ ಮಟ್ಟದ ನೈಟ್ರೇಟ್ ಅನ್ನು ಒಳಗೊಂಡಿರುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ.
ಬೀಟ್ರೂಟ್ ರಸದಲ್ಲಿರುವ ನೈಟ್ರೇಟ್‌ಗಳು ಮೆದುಳಿಗೆ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಈ ಮೂಲಕ ಜ್ಞಾಪಕ ಶಕ್ತಿಯನ್ನು ಸುಧಾರಿಸುತ್ತದೆ.
ಬೀಟ್ರೂಟ್ ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ನೀರಿನ ಅಂಶವನ್ನು ಹೊಂದಿರುತ್ತವೆ. ದೇಹದ ಎನರ್ಜಿಯನ್ನು ಕಾಪಾಡಲು ಸಹಾಯ ಮಾಡುತ್ತದೆ.
ಪ್ರತಿದಿನ ಒಂದು ಲೋಟ ಬೀಟ್ರೂಟ್ ರಸವು ಮಲಬದ್ಧತೆ ಮತ್ತು ಉರಿಯೂತದ ಕರುಳಿನ ಕಾಯಿಲೆ (IBS) ನಂತಹ ನಿಮ್ಮ ಜೀರ್ಣಕಾರಿ ಸಮಸ್ಯೆಗಳಿಗೆ ಪರಿಹಾರವಾಗಿದೆ.
ಬೀಟ್ರೂಟ್ ರಸವು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಂತೆ ಅನೇಕ ಪೋಷಕಾಂಶಗಳಿಂದ ತುಂಬಿರುತ್ತದೆ. ನೈಟ್ರೇಟ್‌ಗಳು, ಬೆಟಾಲೈನ್‌ಗಳು ರೋಗನಿರೋಧಕಶಕ್ತಿ ಹೆಚ್ಚಿಸುವ ಕೆಲಸ ಮಾಡುತ್ತದೆ.
ಸೂಚನೆ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ.