ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವನೆ ಮಾಡಿದರೆ ಹಲವಾರು ಆರೋಗ್ಯಕರ ಪ್ರಯೋಜನಗಳು ದೊರೆಯುತ್ತವೆ.
ತುಪ್ಪದಲ್ಲಿ ಕ್ಯಾಲ್ಸಿಯಂ, ಆರೋಗ್ಯಕರ ಕೊಬ್ಬಿನ ಅಂಶಗಳು, ಒಮೆಗಾ 3 ಫ್ಯಾಟಿ ಆಮ್ಲಗಳು ಜೊತೆಗೆ ವಿಟಮಿನ್ A, D, E ಮತ್ತು K ಸಮೃದ್ಧವಾಗಿವೆ.
ತುಪ್ಪ ಸೇವನೆಯಿಂದ ಚರ್ಮ ಒಣಗುವುದಿಲ್ಲ ಮತ್ತು ಚರ್ಮದ ಮೇಲಿನ ಸುಕ್ಕುಗಳು, ಕಲೆಗಳು ಹಾಗೂ ಮೊಡವೆ ಗುಳ್ಳೆಗಳು ನಿವಾರಣೆಯಾಗುತ್ತವೆ.
ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವನೆ ಮಾಡುವುದರಿಂದ ಶೀತದ ವಾತಾವರಣದಿಂದ ಕಂಡುಬರುವ ಜ್ವರ, ಚಳಿ ಮಾಯವಾಗುತ್ತದೆ.
ತುಪ್ಪದಲ್ಲಿರುವ ಪೌಷ್ಟಿಕಾಂಶಗಳು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ ಮತ್ತು ಮೆದುಳಿನ ಹಲವಾರು ಕಾಯಿಲೆಗಳಿಂದ ರಕ್ಷಿಸುತ್ತದೆ.
ನಿಯಮಿತವಾಗಿ ತುಪ್ಪವನ್ನ ಸೇವಿಸಿದರೆ ನಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.
ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತುಪ್ಪ ಸೇವನೆ ಮಾಡಿದ್ರೆ ಮೂಳೆಗಳಿಗೆ ಬಲ ಸಿಗುವುದಲ್ಲದೆ ತೂಕ ನಷ್ಟಕ್ಕೂ ಸಹಕಾರಿಯಾಗಿದೆ.
ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವನೆ ಮಾಡುವುದರಿಂದ ನಮ್ಮ ದೇಹದಲ್ಲಿ ರಕ್ತನಾಳಗಳ ಕಾರ್ಯಚಟುವಟಿಕೆ ಹೆಚ್ಚಾಗುತ್ತದೆ ಮತ್ತು ರಕ್ತ ಸಂಚಾರ ಉತ್ತಮಗೊಳ್ಳುತ್ತದೆ.