ಪೇರಳೆ ಹಣ್ಣನ್ನು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ಅನೇಕ ರೀತಿಯ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಪೇರಳೆಯಲ್ಲಿ ವಿಟಮಿನ್ ಸಿ, ಕಾರ್ಬೋಹೈಡ್ರೇಟ್, ಫೈಬರ್, ತಾಮ್ರ, ಸತು, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮುಂತಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ.
ಈ ಹಣ್ಣನ್ನು ಮಲಬದ್ಧತೆ ಮತ್ತು ಮಧುಮೇಹದ ಸಮಸ್ಯೆಗಳಿಗೆ ರಾಮಬಾಣವೆಂದು ಪರಿಗಣಿಸಲಾಗಿದೆ. ಅಷ್ಟೇ ಅಲ್ಲದೆ ತ್ವಚೆ ಮತ್ತು ಕೂದಲಿಗೆ ಇದು ತುಂಬಾ ಪ್ರಯೋಜನಕಾರಿ.
ಪೇರಳೆಯಲ್ಲಿ ಫೈಬರ್ ಹೇರಳವಾಗಿ ಕಂಡುಬರುತ್ತದೆ. ಇದು ಕರುಳಿನ ಚಲನೆಗೆ ಸಹಾಯ ಮಾಡುತ್ತದೆ. ಮಲಬದ್ಧತೆಯಿಂದ ಬಳಲುತ್ತಿದ್ದರೆ, ಪೇರಳೆ ಅಥವಾ ಅದರ ಜ್ಯೂಸ್ ಅನ್ನು ವಾರದಲ್ಲಿ ಎರಡರಿಂದ ಮೂರು ಬಾರಿ ಕುಡಿಯಬೇಕು.
ಪೇರಳೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪೊಟ್ಯಾಸಿಯಮ್ ಕಂಡುಬರುತ್ತದೆ. ಇದರಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ. ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.
ಪೇರಳೆಯಲ್ಲಿ ತಾಮ್ರವು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ, ಇದು ಥೈರಾಯ್ಡ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಪೋಷಕಾಂಶಗಳು ಥೈರಾಯ್ಡ್ ರೋಗಿಗಳಿಗೆ ಪ್ರಯೋಜನಕಾರಿ.
ಪೇರಳೆಯಲ್ಲಿ ವಿಟಮಿನ್-ಬಿ3 ಮತ್ತು ವಿಟಮಿನ್-ಬಿ6 ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತವೆ. ಇದು ಮೆದುಳಿನ ಬೆಳವಣಿಗೆಗೆ ಸಹಕಾರಿಯಾಗಿದೆ. ನಿಯಮಿತವಾಗಿ ಪೇರಳವನ್ನು ಸೇವಿಸಿದರೆ, ಮೆದುಳು ಆರೋಗ್ಯಕರವಾಗಿರುತ್ತದೆ.
ಪೇರಳೆಯಲ್ಲಿ ಫೈಬರ್ ಮತ್ತು ಪ್ರೊಟೀನ್ ಸಮೃದ್ಧವಾಗಿದೆ. ತೂಕ ಇಳಿಸಿಕೊಳ್ಳಲು ಬಯಸುವವರು ನಿಮ್ಮ ದೈನಂದಿನ ಆಹಾರದಲ್ಲಿ ಪೇರಳವನ್ನು ಸೇರಿಸಿಕೊಳ್ಳಬಹುದು.
ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.