ಹಸಿ ಬೆಳ್ಳುಳ್ಳಿಯು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಬೆಳ್ಳುಳ್ಳಿಯಲ್ಲಿ ವಿಟಮಿನ್ ಬಿ, ವಿಟಮಿನ್ ಸಿ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ರಂಜಕ, ಸೆಲೆನಿಯಮ್ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಪೋಷಕಾಂಶಗಳಿವೆ.

Ranjitha R K
Mar 30,2023


ಬೆಳ್ಳುಳ್ಳಿ ಆಂಟಿಬ್ಯಾಕ್ಟೀರಿಯಲ್, ಆಂಟಿವೈರಲ್, ಆಂಟಿಫಂಗಲ್ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಸಹ ಹೊಂದಿದೆ.


ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿರುವ ಕಾರಣ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.


ಬೆಳ್ಳುಳ್ಳಿ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಅಲ್ಲದೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುತ್ತದೆ.


ಬೆಳ್ಳುಳ್ಳಿ ಮೆಗ್ನೀಸಿಯಮ್, ರಂಜಕದಂತಹ ಅಂಶಗಳನ್ನು ಒಳಗೊಂಡಿದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.


ಬೆಳ್ಳುಳ್ಳಿ ಸೇವನೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ.


ಬೆಳ್ಳುಳ್ಳಿ ಸೇವನೆಯಿಂದ ಹೃದಯಾಘಾತ, ಪಾರ್ಶ್ವವಾಯು ಮುಂತಾದವುಗಳ ಅಪಾಯವನ್ನು ಕಡಿಮೆ ಮಾಡುತ್ತದೆ.


ಉತ್ಕರ್ಷಣ ನಿರೋಧಕ ಮತ್ತು ಉರಿಯುತದ ಲಕ್ಷಣಗಳನ್ನು ಹೊಂದಿರುವ ಬೆಳ್ಳುಳ್ಳಿ ಮೆದುಳಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.


ಬೆಳ್ಳುಳ್ಳಿ ಸಂಧಿವಾತದ ಸಮಸ್ಯೆ ನಿವಾರಣೆಗೂ ಸಹಾಯ ಮಾಡುತ್ತದೆ.

VIEW ALL

Read Next Story