ಐರನ್, ಮೆಗ್ನಿಶಿಯಂ, ಫಾಸ್ಪೆಟ್,ಸೆಲೆನಿಯಂ,ಜಿಂಕ್, ಅಂತಿ ಆಕ್ಸಿಡೆಂಟ್ ದಾಳಿಂಬೆಯಲ್ಲಿ ಹೇರಳವಾಗಿ ಕಂಡು ಬರುತ್ತದೆ.
ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆ ಅದನ್ನು ನಿಯಂತ್ರಣಕ್ಕೆ ತರುವಲ್ಲಿ ದಾಳಿಂಬೆ ಉತ್ತಮ ಪರಿಣಾಮ ಬೀರುತ್ತದೆ.
ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿಯೂ ದಾಳಿಂಬೆ ಸಹಾಯ ಮಾಡುತ್ತದೆ.
ದಾಳಿಂಬೆಯಲ್ಲಿ ಆಂಟಿ ಆಕ್ಸಿಡೆಂಟ್ ಹೇರಳವಾಗಿ ಕಂಡು ಬರುತ್ತದೆ. ಇದು ತ್ವಚೆಯ ಕಾಂತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ನಿತ್ಯ ದಾಳಿಂಬೆ ತಿಂದರೆ ಜೀರ್ಣಕ್ರಿಯೆ ಉತ್ತಮವಾಗಿ ಆಗುತ್ತದೆ. ಉದರದ ಸಮಸ್ಯೆಗಳನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ.
ದಾಳಿಂಬೆ ಸೇವನೆ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
ದಾಳಿಂಬೆ ಐರನ್ ನ ಸಮೃದ್ದ ಮೂಲ. ಇದರ ಸೇವನೆಯಿಂದ ಹಿಮೊಗ್ಲೋಬಿನ್ ಕೊರತೆ ನೀಗುತ್ತದೆ.
ನಿತ್ಯ ದಾಳಿಂಬೆ ತಿಂದರೆ ಕ್ಯಾನ್ಸರ್ ನ ಅಪಾಯ ಕೂಡಾ ಕಡಿಮೆಯಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ