ಬೋಳುತಲೆಯಲ್ಲೂ ದಷ್ಟಪುಷ್ಟ ಕಡುಕಪ್ಪು ಕೂದಲು ಬೆಳೆಯುವಂತೆ ಮಾಡುತ್ತೆ ಈ ಎಣ್ಣೆ

Bhavishya Shetty
Nov 24,2024

ಸಾಸಿವೆ ಎಣ್ಣೆ

ಇತ್ತೀಚಿನ ದಿನಗಳಲ್ಲಿ ಕೂದಲಿನ ಸಮಸ್ಯೆಗಳು ವೇಗವಾಗಿ ಹೆಚ್ಚಾಗುತ್ತಿವೆ. ಕೂದಲು ಉದುರುವುದು, ತಲೆಹೊಟ್ಟು, ಬಿಳಿ ಕೂದಲು ಇತ್ಯಾದಿ ಸಮಸ್ಯೆಗಳು ಬೆಂಬಿಡದಂತೆ ಕಾಡುತ್ತಿವೆ. ಈ ಎಲ್ಲ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಮಾರುಕಟ್ಟೆಯಲ್ಲಿ ಹಲವು ದುಬಾರಿ ಎಣ್ಣೆಗಳು ಲಭ್ಯವಿವೆ. ಆದರೆ ಇವೆಲ್ಲಕ್ಕಿಂತ ಅದ್ಭುತ ಪ್ರಯೋಜನ ನೀಡುವ ಎಣ್ಣೆಯೊಂದಿದೆ.

ಪೋಷಕಾಂಶಗಳು

ಸಾಸಿವೆ ಎಣ್ಣೆಯಲ್ಲಿ ವಿಟಮಿನ್ ಇ, ವಿಟಮಿನ್ ಬಿ ಕಾಂಪ್ಲೆಕ್ಸ್, ಪ್ರೋಟೀನ್, ಆಂಟಿಆಕ್ಸಿಡೆಂಟ್ ಮತ್ತು ಒಮೆಗಾ 3 ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳು ಕಂಡುಬರುತ್ತವೆ. ಈ ಎಲ್ಲಾ ಪೋಷಕಾಂಶಗಳು ಕೂದಲಿಗೆ ತುಂಬಾ ಪ್ರಯೋಜನಕಾರಿ.

ಕೂದಲಿನ ಬೆಳವಣಿಗೆ

ಸಾಸಿವೆ ಎಣ್ಣೆಯನ್ನು ಕೂದಲಿಗೆ ಹಚ್ಚುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚಾಗುತ್ತದೆ. ಜೊತೆಗೆ ಕೂದಲು ಉದುರುವುದು ಕಡಿಮೆಯಾಗುವುದಲ್ಲದೆ, ತಲೆಹೊಟ್ಟು ಮತ್ತು ತುರಿಕೆ ಮುಂತಾದ ಕೂದಲಿನ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.

ಮಸಾಜ್ ಮಾಡಿ

ಸಾಸಿವೆ ಎಣ್ಣೆಯನ್ನು ಬಿಸಿ ಮಾಡಿ ಕೂದಲು ಮತ್ತು ನೆತ್ತಿಯ ಮೇಲೆ ಸಂಪೂರ್ಣವಾಗಿ ಮಸಾಜ್ ಮಾಡಿ. ಇದರಿಂದ ಕೂದಲಿಗೆ ಪೋಷಣೆ ದೊರೆಯುತ್ತದೆ ಮತ್ತು ತಲೆಹೊಟ್ಟು ನಿವಾರಣೆಯಾಗುತ್ತದೆ.

ತಲೆಹೊಟ್ಟು

ವಾರಕ್ಕೊಮ್ಮೆ ಅಥವಾ ಎರಡು ಬಾರಿ ಈ ಎಣ್ಣೆ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬಲಗೊಳ್ಳುತ್ತದೆ ಮತ್ತು ತಲೆಹೊಟ್ಟು ಕಡಿಮೆಯಾಗುತ್ತದೆ.

ಕೂದಲಿಗೆ ಪೋಷಣೆ

ಸಾಸಿವೆ ಎಣ್ಣೆ ಕೂದಲಿಗೆ ಪೋಷಣೆ ನೀಡುತ್ತದೆ ಮತ್ತು ಬಲವಾಗಿ, ಆರೋಗ್ಯಕರವಾಗಿ ಮಾಡುತ್ತದೆ. ಈ ಕಾರಣದಿಂದಾಗಿ, ಕೂದಲು ವೇಗವಾಗಿ ಬೆಳೆಯುತ್ತದೆ.

ಸೂಚನೆ

ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಮತ್ತು ವೃತ್ತಿಪರ ವೈದ್ಯಕೀಯ ಸಲಹೆಯಾಗಿ ತೆಗೆದುಕೊಳ್ಳಬಾರದು. ನೀವು ಯಾವುದೇ ಪ್ರಶ್ನೆಗಳನ್ನು ಅಥವಾ ಕಾಳಜಿಗಳನ್ನು ಹೊಂದಿದ್ದರೆ, ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ

VIEW ALL

Read Next Story