ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದು ಅಥವಾ ಚಹಾ ಕುಡಿಯುವುದು ಒಳ್ಳೆಯದಲ್ಲ ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ
ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಚಹಾ ಕುಡಿದರೆ ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ.
ಅಷ್ಟೇ ಅಲ್ಲದೆ ಅಜೀರ್ಣತೆ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.
ಕಾಫಿ ಅಥವಾ ಚಹಾ ಕುಡಿದ ನಂತರ ದೇಹದಲ್ಲಿ ನಿರ್ಜಲೀಕರಣ ಸಮಸ್ಯೆ ಎದುರಾಗುತ್ತದೆ.
ಖಾಲಿ ಹೊಟ್ಟೆಯಲ್ಲಿ ಕಾಫಿ ಅಥವಾ ಚಹಾ ಕುಡಿದರೆ ಬಾಯಲ್ಲಿ ಕಂಡುಬರುವ ಬ್ಯಾಕ್ಟೀರಿಯಾಗಳು ಹಲ್ಲುಗಳ ಭಾಗದಲ್ಲಿ ಆಮ್ಲಿಯ ಅಂಶವನ್ನು ಹೆಚ್ಚು ಮಾಡುತ್ತವೆ.