ಸಾಮಾನ್ಯವಾಗಿ ನಾವು ನಮ್ಮ ಕೂದಲನ್ನು ಆರೋಗ್ಯಕರವಾಗಿಡಲು ತೆಂಗಿನ ಎಣ್ಣೆಯನ್ನು ಬಳಸುತ್ತೇವೆ. ದಕ್ಷಿಣ ಭಾರತದಲ್ಲಿ ತೆಂಗಿನ ಎಣ್ಣೆಯನ್ನು ಅಡುಗೆಯಲ್ಲಿ ಬಳಸಲಾಗುತ್ತದೆ. ಆಯುರ್ವೇದದಲ್ಲಿಯೂ ಸಹ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತೆಂಗಿನ ಎಣ್ಣೆಯನ್ನು ಸೇವಿಸಲು ಸಲಹೆ ನೀಡಲಾಗುತ್ತದೆ.
ಹೀಗೆ ಮಾಡುವುದರಿಂದ ತೂಕ ಕಡಿಮೆಯಾಗುವುದರ ಜೊತೆಗೆ ಅನೇಕ ರೋಗಗಳಿಂದ ಮುಕ್ತಿ ಸಿಗುತ್ತದೆ. ಹೆಲ್ತ್ ಲೈನ್ ಪ್ರಕಾರ, ತೆಂಗಿನ ಎಣ್ಣೆಯಲ್ಲಿ ಕೊಬ್ಬಿನಾಮ್ಲಗಳ ವಿಶಿಷ್ಟ ಸಂಯೋಜನೆಯು ಕಂಡುಬರುತ್ತದೆ. ಇದು ನಮ್ಮ ಮೆದುಳು ಮತ್ತು ಹೃದಯವನ್ನು ಸುಧಾರಿಸುತ್ತದೆ. ಜೊತೆಗೆ ತೂಕ ಕಡಿಮೆ ಮಾಡಲು ತುಂಬಾ ಉಪಯುಕ್ತವಾಗಿದೆ.
ತೆಂಗಿನ ಎಣ್ಣೆಯ ನಿಯಮಿತ ಸೇವನೆಯು ದೇಹದಲ್ಲಿ ಚಯಾಪಚಯವನ್ನು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
ಕೊಬ್ಬರಿ ಎಣ್ಣೆಯಲ್ಲಿ ಕ್ಯಾಪ್ರಿಕ್ ಆಸಿಡ್, ಲಾರಿಕ್ ಆಸಿಡ್, ಕ್ಯಾಪ್ರಿಲಿಕ್ ಆಸಿಡ್ ಇದ್ದು ಇದು ರೋಗನಿರೋಧಕ ಶಕ್ತಿಯನ್ನು ವೇಗವಾಗಿ ಹೆಚ್ಚಿಸಲು ಸಹಾಯ ಮಾಡುತ್ತದೆ.
ತೆಂಗಿನ ಎಣ್ಣೆಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ಅಜೀರ್ಣಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ.
ನೀವು ತೆಂಗಿನ ಎಣ್ಣೆಯನ್ನು ಮೌತ್ ಫ್ರೆಶ್ನರ್ ಆಗಿ ಬಳಸಬಹುದು. ಇದು ಬಾಯಿಯಲ್ಲಿರುವ ಯಾವುದೇ ರೀತಿಯ ಸೋಂಕನ್ನು ತೆಗೆದುಹಾಕುತ್ತದೆ.
ತೆಂಗಿನ ಎಣ್ಣೆ ಸೇವಿಸುವುದರಿಂದ ರಕ್ತದಲ್ಲಿನ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಬಹುದು. ಜೊತೆಗೆ ಇದು ಹೃದಯವನ್ನು ಅನೇಕ ಅಪಾಯಕಾರಿ ಕಾಯಿಲೆಗಳಿಂದ ರಕ್ಷಿಸುತ್ತದೆ.
ತೆಂಗಿನ ಎಣ್ಣೆಯಲ್ಲಿರುವ ಗುಣಲಕ್ಷಣಗಳು ಹೊಟ್ಟೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದರಿಂದ ಮಲಬದ್ಧತೆ ಮತ್ತು ಅಸಿಡಿಟಿಯಂತಹ ಸಮಸ್ಯೆಗಳಿಂದ ಮುಕ್ತರಾಗುತ್ತೀರಿ.
ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇವುಗಳನ್ನು ದೃಢೀಕರಿಸುವುದಿಲ್ಲ.