ಅರಿಶಿನವು ಆಯುರ್ವೇದಿಕ್ ಗಿಡಮೂಲಿಕೆಯಾಗಿದ್ದು, ಉರಿಯೂತ ನಿವಾರಕ, ಉತ್ಕರ್ಷಣ ನಿರೋಧಕ & ಬ್ಯಾಕ್ಟೀರಿಯಾ ವಿರೋಧಿ ಗುಣ ಹೊಂದಿದೆ.
ಅರಿಶಿನ ಸೇವನೆಯು ರೋಗನಿರೋಧಕ ಶಕ್ತಿ ಬಲಪಡಿಸುತ್ತದೆ ಮತ್ತು ವೈರಲ್ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಅರಿಶಿನದಲ್ಲಿರುವ ಕರ್ಕ್ಯುಮಿನ್ ಎಂಬ ಅಂಶವು ದೇಹದಿಂದ ಉರಿಯೂತ ತೆಗೆದುಹಾಕಲು ಮತ್ತು ದೇಹವನ್ನು ಆರೋಗ್ಯಕರವಾಗಿರಿಸಲು ಸಹಾಯ ಮಾಡುತ್ತದೆ.
ಅರಿಶಿನ ಸೇವನೆಯು ಮಹಿಳೆಯರಲ್ಲಿ ಹಾರ್ಮೋನುಗಳ ಅಸಮತೋಲನ, ಋತುಚಕ್ರದ ಸಮಸ್ಯೆ & PCOSನ ಲಕ್ಷಣ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಅರಿಶಿನದಲ್ಲಿರುವ ʼಕರ್ಕ್ಯುಮಿನ್ʼ ಅಂಶವು ನಮ್ಮ ದೇಹದ ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸುತ್ತದೆ.
ಹಾಲಿಗೆ ಅರಿಶಿನವನ್ನು ಬೆರೆಸಿ ಕುಡಿಯುವುದರಿಂದ ಶೀತ, ಕೆಮ್ಮು, ಕಫ ಮತ್ತು ಜ್ವರ ದೂರಾಗುತ್ತದೆ.
ಅರಿಶಿನವು ರಕ್ತದೊತ್ತಡ ನಿಯಂತ್ರಿಸುತ್ತದೆ, ಕೀಲು ನೋವನ್ನು ನಿವಾರಿಸಲು ಮತ್ತು ಉತ್ತಮ ನಿದ್ರೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.