ಹೃದಯದ ಆರೋಗ್ಯ ಕಾಪಾಡುವ ಉತ್ತಮ ಆಹಾರಗಳಿವು..!

Zee Kannada News Desk
Jan 12,2025

ಬೀನ್ಸ್

ಬೀನ್ಸ್ ಮತ್ತು ಬೇಳೆಕಾಳುಗಳು ಫೈಬರ್ನಲ್ಲಿ ಸಮೃದ್ಧವಾಗಿವೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ಹೃದಯಕ್ಕೆ ರಕ್ತದ ಹರಿವನ್ನು ಸುಧಾರಿಸುತ್ತದೆ.

ಬೆರ್ರಿ ಹಣ್ಣುಗಳು

ಸ್ಟ್ರಾಬೆರಿ, ಬ್ಲೂಬೆರ್ರಿ, ಮುಂತಾದ ಬೆರ್ರಿಗಳಲ್ಲಿ ಆಂಟಿಆಕ್ಸಿಡೆಂಟ್ಗಳು ಅಧಿಕವಾಗಿವೆ. ಇವು, ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡುತ್ತದೆ

ಡಾರ್ಕ್ ಚಾಕೊಲೇಟ್

ಡಾರ್ಕ್ ಚಾಕೊಲೇಟ್‌ ಪ್ಲೇವನಾಯ್ಡ್‌ಗಳನ್ನು ಹೊಂದಿದ್ದು, ಹೃದಯಕ್ಕೆ ರಕ್ತದ ಹರಿವನ್ನು ಸುಧಾರಿಸುವ ಮೂಲಕ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಗ್ರೀನ್ಸ್

ಲೆಟಿಸ್‌, ಶತಾವರಿ ಮತ್ತು ಎಲೆಕೋಸು ಮುಂತಾದ ಗ್ರೀನ್ಸ್ ವಿಟಮಿನ್ ಕೆ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇವು ಹೃದಯರಕ್ತನಾಳದ ಸಮಸ್ಯೆಗಳನ್ನು ತಡೆಯುತ್ತದೆ.

ಟೊಮೆಟೊ

ಟೊಮ್ಯಾಟೋ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾದ ಲೈಕೋಪೀನ್ ಅನ್ನು ಹೊಂದಿರುತ್ತದೆ. ಇದರಲ್ಲಿರುವ ಪೊಟಾಶಿಯಂ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.

ಡ್ರೈ ಫ್ರೂಟ್ಸ್‌

ಬಾದಾಮಿ, ವಾಲ್‌ನಟ್ಸ್ ಮತ್ತು ಪಿಸ್ತಾಗಳಂತಹ ಬೀಜಗಳು ಆಂಟಿಆಕ್ಸಿಡೆಂಟ್‌ಗಳು ಮತ್ತು ಫೈಬರ್‌ನಲ್ಲಿ ಅಧಿಕವಾಗಿವೆ. ಇವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕರಗಿಸಿ, ಹೃದಯವನ್ನು ಆರೋಗ್ಯವಾಗಿರಿಸುತ್ತದೆ.

ಸಾಲ್ಮನ್

ಸಾಲ್ಮನ್ ಒಮಗಾ-3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ಇವು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆವಕಾಡೊ

ಆವಕಾಡೊಗಳಲ್ಲಿ ಮೊನೊಸಾಚುರೇಟೆಡ್ ಕೊಬ್ಬುಗಳು ಮತ್ತು ಪೊಟ್ಯಾಸಿಯಮ್ ಅಧಿಕವಾಗಿದೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಓಟ್ಸ್

ಓಟ್ಸ್ ಫೈಬರ್ನಲ್ಲಿ ಸಮೃದ್ಧವಾಗಿದೆ. ಇದು ರಕ್ತದಲ್ಲಿರುವ ಕಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಿ ತೂಕವನ್ನು ನಿಯಂತ್ರಣದಲ್ಲಿಡುವ ಮೂಲಕ ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯುತ್ತದೆ.

VIEW ALL

Read Next Story