ಜ್ವರ ಬಂದಾಗ, ಒಬ್ಬ ವ್ಯಕ್ತಿಗೆ ಶೀತದ ಅನುಭವವಾಗುತ್ತದೆ ಮತ್ತು ದೇಹದ ಉಷ್ಣತೆಯು ಹೆಚ್ಚಾಗುತ್ತದೆ. ಈ ಸಮಯದಲ್ಲಿ, ಅಜೀರ್ಣ ಸಮಸ್ಯೆಗಳು ಕೂಡ ಉಂಟಾಗಬಹುದು. ಇದನ್ನು ಕಡಿಮೆ ಮಾಡಲು ಕೆಲವೊಂದು ಹಣ್ಣಿನ ಜ್ಯೂಸ್ ಕುಡಿಯಬಹುದು.
ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಇರುತ್ತದೆ. ಜ್ವರವನ್ನು ಕಡಿಮೆ ಮಾಡಲು ದೇಹವನ್ನು ಹೈಡ್ರೇಟೆಡ್ ಆಗಿಟ್ಟುಕೊಳ್ಳುವುದು ಮುಖ್ಯ. ರೋಗನಿರೋಧಕ ಶಕ್ತಿಗೆ ಕಿತ್ತಳೆ ಸೇವನೆಯೂ ಮುಖ್ಯ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರೋಗಗಳನ್ನು ತಪ್ಪಿಸಲು, ದಿನಕ್ಕೆ ಎರಡು ಕಿತ್ತಳೆ ಹಣ್ಣುಗಳನ್ನು ತಿನ್ನಬೇಕು. ಇದನ್ನು ಜ್ಯೂಸ್ ಮಾಡಿಯೂ ಕುಡಿಯಬಹುದು.
ಆಹಾರದಲ್ಲಿ ಸ್ಟ್ರಾಬೆರಿ, ರಾಸ್್ಬೆರ್ರಿಸ್, ಬೆರಿಹಣ್ಣುಗಳು, ಕ್ರ್ಯಾನ್ಬೆರಿಗಳನ್ನು ಸಹ ಸೇರಿಸಿಕೊಳ್ಳಬಹುದು. ಬೆರ್ರಿ ಹಣ್ಣುಗಳು ಉತ್ತಮ ಪ್ರಮಾಣದ ಫೈಬರ್ ಮತ್ತು ವಿಟಮಿನ್ ಸಿ ಅನ್ನು ಹೊಂದಿರುತ್ತವೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜ್ವರದ ಲಕ್ಷಣಗಳನ್ನು ಅನುಭವಿಸುತ್ತಿದ್ದರೆ ಕ್ರ್ಯಾನ್‌ಬೆರಿ ರಸವನ್ನು ಸಹ ಸೇವಿಸಬಹುದು.
ರೋಗನಿರೋಧಕ ಶಕ್ತಿ ದುರ್ಬಲವಾಗಿದ್ದರೆ ಬೇಗ ಜ್ವರ ಬರುತ್ತದೆ. ಅದರ ಜೊತೆಗೆ ಗಂಟಲು ನೋವು ಅಥವಾ ಇನ್ನಾವುದೇ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹೀಗಿರುವಾಗ ಮಾವಿನಹಣ್ಣಿನಲ್ಲಿ ಹೆಚ್ಚಿನ ನೀರಿನ ಅಂಶವಿದ್ದು, ಉತ್ತಮ ಪ್ರಮಾಣದ ವಿಟಮಿನ್ ಸಿ ಕೂಡ ಇದೆ. ಇದನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಮತ್ತು ಜ್ವರದ ಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಇ ಇದ್ದು, ಹಾನಿ ಮಾಡುವ ರೋಗಕಾರಕಗಳಿಂದ ನಮ್ಮನ್ನು ರಕ್ಷಿಸುವಲ್ಲಿ ಸಹಾಯ ಮಾಡುತ್ತದೆ. ಕಿವಿ ಹಣ್ಣಿನಲ್ಲಿ ಪೊಟ್ಯಾಸಿಯಮ್ ಕೂಡ ಇದೆ. ಅಂತೆಯೇ ಇದರಲ್ಲಿ ಹೆಚ್ಚಿನ ಕ್ಯಾಲೊರಿಗಳಿಲ್ಲ ಮತ್ತು ಕಿವಿ ಸೇವನೆಯು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಕಿತ್ತಳೆ ಹಣ್ಣಿನಲ್ಲಿರುವುದಕ್ಕಿಂತ ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಿದ್ದು, ಇದನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.
ಜ್ವರ ಬಂದಾಗ ನಿಂಬೆ ರಸ ಸೇವಿಸಬೇಕು. ಇದರಲ್ಲಿ ಉತ್ತಮ ಪ್ರಮಾಣದ ಫ್ಲೇವನಾಯ್ಡ್‌ಗಳು ಮತ್ತು ವಿಟಮಿನ್ ಸಿ ಇದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಜ್ವರದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದಿನ ಆಧಾರದಲ್ಲಿ ಬರೆಯಲಾಗಿದೆ. ಇದನ್ನು ಜೀ ನ್ಯೂಸ್ ಅನುಮೋದಿಸುವುದಿಲ್ಲ.