ಮಧುಮೇಹದಿಂದ ಬಳಲುತ್ತಿರುವವರಿಗೆ ಆಹಾರದಲ್ಲಿ ಕೆಂಪು ಬಣ್ಣದ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವುದು ಬಹಳ ಪ್ರಯೋಜನಕಾರಿಯಾಗಿರಲಿದೆ.
ಈ ಹಣ್ಣುಗಳಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ಬ್ಲಡ್ ಶುಗರ್ ನಿಯಂತ್ರಿಸಲು ಸಹಾಯ ಮಾಡುತ್ತದೆ.
ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಸೇಬು ಹಣ್ಣಿನಲ್ಲಿ ಫೈಬರ್ ಮತ್ತು ವಿಟಮಿನ್ ಸಿ ಅಡಗಿರುತ್ತದೆ. ಇದರಲ್ಲಿರುವ ಪೆಕ್ಟಿನ್, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಲೈಕೋಪೀನ್ ಮತ್ತು ವಿಟಮಿನ್ ಸಿ ಯಲ್ಲಿ ಸಮೃದ್ದವಾಗಿರುವ ಟೊಮ್ಯಾಟೋ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.
ದಾಳಿಂಬೆಯು ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲ್ಗ್ ಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ.
ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಕೆಂಪು ಕ್ಯಾಪ್ಸಿಕಂ ವಿಟಮಿನ್ ಎ, ಸಿ ಮತ್ತು ಬಿ 6 ಅನ್ನು ಹೊಂದಿರುತ್ತದೆ.ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.
ಪ್ಲಮ್ ಕರಗುವ ಫೈಬರ್ ಅನ್ನು ಹೊಂದಿರುತ್ತದೆ. ಇದು ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.