ನೈಸರ್ಗಿಕವಾಗಿ ಕಂಡುಬರುವ ಗಿಡಮೂಲಿಕೆಗಳ ಸಹಾಯದಿಂದ, ಮಧುಮೇಹವನ್ನು ನಿಯಂತ್ರಿಸುವುದು ಸಾಧ್ಯವಾಗುತ್ತದೆ.
ನಿತ್ಯ ಆಹಾರದಲಿ ಬೆಳ್ಳುಳ್ಳಿ ಸೇವನೆಯಿಂದ ಕೂಡಾ ಮಧುಮೇಹವನ್ನು ನಿಯಂತ್ರಣಕ್ಕೆ ತರಬಹುದು.
ನಿತ್ಯ ಆಹಾರದಲ್ಲಿ ಶುಂಠಿಯ ಸೇವನೆಯು ಮಧುಮೇಹವನ್ನು ನಿಯಂತ್ರಣಕ್ಕೆ ತರಲು ಸಹಾಯ ಮಾಡುತ್ತದೆ.
ಮೆಂತ್ಯೆ ಬೀಜಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಗುಣವನ್ನು ಹೊಂದಿವೆ. ಇದು ಸಕ್ಕರೆಯ ಜೀರ್ಣಕ್ರಿಯೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ.
ಚಕ್ಕೆ ಮಧುಮೇಹದ ಜೊತೆಗೆ ಒತ್ತಡ, ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳನ್ನು ಕೂಡಾ ನಿವಾರಿಸುತ್ತದೆ.
ತುಳಸಿ ಎಲೆಗಳನ್ನು ನಿಯಮಿತವಾಗಿ ಸೇವಿಸಿದರೆ ಮಧುಮೇಹದಿಂದ ಉಂಟಾಗುವ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ.
ಮಧುಮೇಹ ರೋಗಿಗಳಿಗೆ ಸ್ಟೀವಿಯಾ ತುಂಬಾ ಉಪಯುಕ್ತವಾಗಿದೆ. ಇದು ನೈಸರ್ಗಿಕ ಸಿಹಿಕಾರಕವಾಗಿದೆ.