ಬೇಸಿಗೆಯಲ್ಲೂ ಕಲ್ಲಂಗಡಿ ಹಣ್ಣನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಲಾಗುತ್ತದೆ.
ಇದರ ಸಂಪೂರ್ಣ ಆರೋಗ್ಯ ಪ್ರಯೋಜನ ಸಿಗಬೇಕಾದರೆ ಈ ಹಣ್ಣನ್ನು ಸರಿಯಾದ ಸಮಯದಲ್ಲಿಯೇ ಸೇವಿಸಬೇಕು.
ಕಲ್ಲಂಗಡಿ ಹಣ್ಣನ್ನು ಬೆಳಗ್ಗಿನಿಂದ ಮಧ್ಯಾಹ್ನದ ಒಳಗೆ ಸೇವಿಸಬೇಕು.
ಅದರಲ್ಲಿಯೂ ಬೆಳಿಗ್ಗೆ ಖಾಲಿ ಹೊಟ್ಟೆಗೆ ಕಲ್ಲಂಗಡಿ ಹಣ್ಣನ್ನು ಸೇವಿಸಿದರೆ ಹೆಚ್ಚು ಪ್ರಯೋಜನವಾಗುವುದು.
ಬೆಳಗಿನ ಉಪಹಾರವಲ್ಲದೆ, ಮಧ್ಯಾಹ್ನದ ಊಟದ ಸಮಯದಲ್ಲಿಯೂ ಇದನ್ನು ಸೇವಿಸಬಹುದು.
ಬೇಸಿಗೆಯಲ್ಲಿ ಮಧ್ಯಾಹ್ನ ಹೆಚ್ಚು ಬಿಸಿಲು ಶಾಖ ಇರುತ್ತದೆ. ಹಾಗಾಗಿ ಈ ಸಮಯದಲ್ಲಿ ಕಲ್ಲಂಗಡಿ ಹಣ್ಣಿನ ಸೇವನೆ ಹೆಚ್ಚು ಉಪಯುಕ್ತ.
ರಾತ್ರಿ ಕಲ್ಲಂಗಡಿ ಹಣ್ಣನ್ನು ಸೇವಿಸಬಾರದು. ರಾತ್ರಿ ಇದನ್ನು ಸೇವಿಸಿದರೆ ಹೊಟ್ಟೆ ಕೆಡುವ ಅಪಾಯವಿರುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ