ಮಧುಮೇಹಿಗಳು ಮಾವಿನಹಣ್ಣು ತಿನ್ನಬಹುದೇ? ಇಲ್ಲಿದೆ ಸ್ಪಷ್ಟ ಉತ್ತರ

Bhavishya Shetty
May 11,2024


ಭಾರತದಲ್ಲಿ ಲಕ್ಷಾಂತರ ಜನರು ಮಧುಮೇಹದಂತಹ ದೀರ್ಘಕಾಲದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಟೈಪ್-1 ಮಧುಮೇಹವು ಸ್ವಯಂ ನಿರೋಧಕ ಪ್ರತಿಕ್ರಿಯೆಯಿಂದ ಉಂಟಾಗುತ್ತದೆ,


ಆದರೆ ಟೈಪ್-2 ಮಧುಮೇಹವು ಕೆಟ್ಟ ಜೀವನಶೈಲಿ ಮತ್ತು ಅಭ್ಯಾಸಗಳಿಂದ ಉಂಟಾಗುತ್ತದೆ. ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾದಾಗ, ಈ ರೋಗ ಕಾಣಿಸಿಕೊಳ್ಳುತ್ತದೆ.


ಹೆಚ್ಚಿನ ಸಂದರ್ಭಗಳಲ್ಲಿ, ಮಧುಮೇಹ ರೋಗಿಗಳು ಸಕ್ಕರೆಯ ಸೇವನೆಯನ್ನು ಕಡಿಮೆ ಮಾಡಬೇಕು ಮತ್ತು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವ ಆಹಾರವನ್ನು ಸೇವಿಸಬೇಕು. ಅಂದರೆ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸದ ಆಹಾರಗಳು.


ಮಧುಮೇಹ ಹೊಂದಿದ್ದರೆ, ಕೆಲ ಹಣ್ಣುಗಳನ್ನು ಸೇವಿಸದಿರುವುದು ಒಳ್ಳೆಯದು. ಆದರೆ ಹಣ್ಣುಗಳ ರಾಜ ಮಾವು ಅನ್ನು ತಿನ್ನಬಹುದೇ ಎಂಬುದು ಅನೇಕರ ಪ್ರಶ್ನೆಯಾಗಿದೆ.


ಮಾವಿನಹಣ್ಣಿನಲ್ಲಿ ಸಕ್ಕರೆಯ ಪ್ರಮಾಣವು ತುಂಬಾ ಹೆಚ್ಚಾಗಿರುತ್ತದೆ. ಆದ್ದರಿಂದ ಮಧುಮೇಹ ರೋಗಿಗಳು ಇದನ್ನು ತಿನ್ನದಿರುವುದೇ ಉತ್ತಮ. ಆದರೆ ಆರೋಗ್ಯ ತಜ್ಞರ ಪ್ರಕಾರ, ಮಾವಿನಹಣ್ಣನ್ನು ನಿಯಂತ್ರಿತ ಪ್ರಮಾಣದಲ್ಲಿ ಸೇವಿಸಿದರೆ ಪ್ರಯೋಜನ ನೀಡುತ್ತದೆ.


ಮಾವಿನ ಹಣ್ಣನ್ನು ಅಲ್ಪ ಪ್ರಮಾಣದಲ್ಲಿ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವುದಿಲ್ಲ. ವೈದ್ಯರ ಪ್ರಕಾರ, ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುವ ಮಧುಮೇಹ ರೋಗಿಗಳು ಮಾವಿನ ಹಣ್ಣುಗಳನ್ನು ಸೇವಿಸಬಹುದು.


ಮಾವು ತುಂಬಾ ಹೆಚ್ಚಿನ ಸಕ್ಕರೆ ಮಟ್ಟವನ್ನು ಹೊಂದಿದೆ. ಆದರೆ ಇದು ಕಡಿಮೆ ಮಟ್ಟದ ಕಾರ್ಬೋಹೈಡ್ರೇಟ್ಗಳನ್ನು ಹೊಂದಿರುತ್ತದೆ. ಮಾವು ಎಲ್ಲಾ ಅಗತ್ಯ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿದ್ದು, ಉತ್ತಮ ಪ್ರಮಾಣದ ವಿಟಮಿನ್ ಇ, ಕೆ ಮತ್ತು ಬಿ ಕಾಂಪ್ಲೆಕ್ಸ್ ಮತ್ತು ಹೆಚ್ಚಿನ ಮಟ್ಟದ ಫೈಬರ್’ನಿಂದ ಸಮೃದ್ಧವಾಗಿದೆ.


ಮಧುಮೇಹ ಹೊಂದಿದ್ದರೆ, 1/2 ಕಪ್ (82.5 ಗ್ರಾಂ) ಮಾವಿನಹಣ್ಣು ತಿನ್ನಬಹುದು. ಹೀಗೆ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಹೆಚ್ಚಾಗುತ್ತದೆಯೇ ಅಥವಾ ಇಲ್ಲವೇ ಎಂಬುದು ತಿಳಿಯುತ್ತದೆ.


ಚಯಾಪಚಯ ಅಸ್ವಸ್ಥತೆಗಳ ಚಿಕಿತ್ಸೆಯಲ್ಲಿ ಮಾವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸಂಶೋಧನೆ ತೋರಿಸುತ್ತದೆ. ಮಾವಿನ ಹಣ್ಣನ್ನು ಪ್ರತಿನಿತ್ಯ ನಿಯಮಿತ ಪ್ರಮಾಣದಲ್ಲಿ ಸೇವಿಸಿದರೆ ಅಧಿಕ ಕೊಲೆಸ್ಟ್ರಾಲ್ ಹಾಗೂ ಮಧುಮೇಹವನ್ನು ತಡೆಯಬಹುದು.


ಮಧುಮೇಹದ ಸಂದರ್ಭದಲ್ಲಿ, ಮಾವನ್ನು ಕಡಿಮೆ ಪ್ರಮಾಣದಲ್ಲಿ ತಿನ್ನಬಹುದು. ಅಲ್ಲದೆ ಪ್ರತಿದಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸುತ್ತಿರಿ.

ಸೂಚನೆ:

ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.

VIEW ALL

Read Next Story