ನಿಯಮಿತ ಕ್ಯಾರೆಟ್ ಜ್ಯೂಸ್ ಸೇವನೆಯಿಂದ ಈ ಆರೋಗ್ಯ ಸಮಸ್ಯೆಗಳು ನಿಮ್ಮ ಹತ್ತಿರವೂ ಸುಳಿಯಲ್ಲ!

ಕ್ಯಾರೆಟ್

ಹಲವು ಜೀವಸತ್ವಗಳಿಂದ ತುಂಬಿರುವ ಕ್ಯಾರೆಟ್ ಅನ್ನು ಹಸಿಯಾಗಿಯೂ ತಿನ್ನಬಹುದು. ಆದರೆ, ಇದರ ಜ್ಯೂಸ್ ತಯಾರಿಸಿ ಕುಡಿಯುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಆಗಿದೆ.

ದೃಷ್ಟಿ ಸುಧಾರಣೆ

ಕ್ಯಾರೆಟ್ ನಲ್ಲಿ ವಿಟಮಿನ್ ಎ ಹೆಚ್ಚಾಗಿದ್ದು ನಿತ್ಯ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ಕಣ್ಣಿನ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

ರೋಗನಿರೋಧಕ ಶಕ್ತಿ

ಕ್ಯಾರೆಟ್ ಜ್ಯೂಸ್ ವಿಟಮಿನ್ ಸಿ ಯಿಂದ ತುಂಬಿರುತ್ತದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕ್ಯಾನ್ಸರ್

ಕ್ಯಾರೆಟ್ ಜ್ಯೂಸ್‌ನಲ್ಲಿರುವ ಕೆಲವು ಸಂಯುಕ್ತಗಳು ಕ್ಯಾನ್ಸರ್ ನಂತಹ ಆಪಾಯಕಾರಿ ಕಾಯಿಲೆಗಳನ್ನು ತಡೆಗಟ್ಟುವಲ್ಲಿಯೂ ಪರಿಣಾಮಕಾರಿ ಆಗಿದೆ.

ಚರ್ಮ ರಕ್ಷಣೆ

ಕ್ಯಾರೆಟ್ ಜ್ಯೂಸ್‌ನಲ್ಲಿ ಕಂಡು ಬರುವ ಬೀಟಾ ಕ್ಯಾರೋಟಿನ್ ಸನ್ಬರ್ನ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಹೃದಯದ ಆರೋಗ್ಯ

ಕ್ಯಾರೆಟ್ ಜ್ಯೂಸ್‌ನಲ್ಲಿ ಸಾಕಷ್ಟು ಪೊಟ್ಯಾಸಿಯಮ್ ಕಂಡು ಬರುತ್ತದೆ. ಹಾಗಾಗಿ ನಿಯಮಿತವಾಗಿ ಇದರ ಸೇವನೆಯು ಹೃದಯದ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ.

ಹೈ ಬಿಪಿ

ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೂ ಕೂಡ ಕ್ಯಾರೆಟ್ ಜ್ಯೂಸ್ ತುಂಬಾ ಪ್ರಯೋಜನಕಾರಿ.

ಪಾರ್ಶ್ವವಾಯು

ಕ್ಯಾರೆಟ್ ಜ್ಯೂಸ್ ಸೇವನೆಯು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಕೆಲವು ಅಧ್ಯಯನಗಳಿಂದ ತಿಳಿದುಬಂದಿದೆ.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story