ಕೆಲವು ಅಭ್ಯಾಸಗಳನ್ನು ಬದಲಾಯಿಸಿಕೊಂಡು, ಆರೋಗ್ಯಕರ ಅಭ್ಯಾಸಗಳನ್ನು ಅನುಸರಿಸಿದರೆ, ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು.
ತಜ್ಞರ ಪ್ರಕಾರ, ಆರೋಗ್ಯಕರ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಉತ್ತಮ ನಿದ್ರೆ ಮತ್ತು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾದಿಸುವುದರ ಮೂಲಕ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಬಹುದು.
ಉತ್ತಮ ಆರೋಗ್ಯಕ್ಕಾಗಿ, ಪ್ರತಿದಿನ 40 ನಿಮಿಷ ವ್ಯಾಯಾಮ ಮಾಡುವುದು ಬಹಳ ಅವಶ್ಯಕ. ವಾರದಲ್ಲಿ 5 ದಿನ ಹೀಗೆ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಶೇಕಡಾ 30 ರಷ್ಟು ಕಡಿಮೆ ಮಾಡಬಹುದು. ಇದು ತೂಕ ನಷ್ಟ, ರಕ್ತದ ಸಕ್ಕರೆ ಮಟ್ಟ, ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ.
ಸಂತೋಷದಿಂದ ಇದ್ದಾಗ, ದೇಹದಲ್ಲಿ ಎಂಡಾರ್ಫಿನ್ ಹಾರ್ಮೋನ್ ಗಳ ಬಿಡುಗಡೆಯಾಗುತ್ತದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ.
ಉತ್ತಮ ನಿದ್ರೆ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ರಾತ್ರಿ ವೇಳೆ 7-8 ಗಂಟೆಗಳ ಕಾಲ ನಿದ್ದೆ ಮಾಡಲೇಬೇಕು. ರಾತ್ರಿ ಸರಿಯಾಗಿ ನಿದ್ದೆ ಮಾಡುವುದರಿಂದ ಅನೇಕ ಕಾಯಿಲೆಗಳನ್ನು ದೂರ ಇಡಬಹುದು.
WHO ಅಂಕಿಅಂಶಗಳ ಪ್ರಕಾರ, ಧೂಮಪಾನ ಮತ್ತು ಮದ್ಯಪಾನದಿಂದ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ. ಇದು ಹೃದ್ರೋಗದಿಂದ ಸಾವಿನ ಅಪಾಯವನ್ನು ಶೇಕಡಾ 50 ರಷ್ಟು ಹೆಚ್ಚಿಸುತ್ತದೆ.
ಆಹಾರದಲ್ಲಿ ಎಣ್ಣೆಯ ಸೇವನೆಯನ್ನು ಕಡಿಮೆ ಮಾಡಿ. ಅಂದರೆ ಆಹಾರದಲ್ಲಿ ಎಣ್ಣೆಯನ್ನು ಮಿತವಾಗಿ ಬಳಸಿ. ಬೀಜಗಳು ಮತ್ತು ಪ್ರೋಟೀನ್ ಸಮೃದ್ಧವಾಗಿರುವ ಆಹಾರಗಳನ್ನು ನಿಯಮಿತವಾಗಿ ಸೇವಿಸಿ.
ಫುಲ್ ಬ್ಲಡ್ ಕೌಂಟ್ , ಕೊಲೆಸ್ಟ್ರಾಲ್ ಮಟ್ಟ, ಮೂತ್ರಪಿಂಡ, ಯಕೃತ್ತು ಮತ್ತು ಥೈರಾಯ್ಡ್ ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟ ಮತ್ತು ಇಸಿಜಿ ಈ ಎಲ್ಲಾ ಪರೀಕ್ಷೆಗಳನ್ನು ಕಾಲಕಾಲಕ್ಕೆ ಮಾಡಿಸಬೇಕು.
ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದಿನ ಆಧಾರದಲ್ಲಿ ಬರೆಯಲಾಗಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.