ಸಾಕಷ್ಟು ಪ್ರಮಾಣದ ವಿಟಮಿನ್ ಎ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ ಮತ್ತು ಪೊಟ್ಯಾಸಿಯಮ್ ಇತ್ಯಾದಿಗಳು ದಾಲ್ಚಿನ್ನಿಯಲ್ಲಿ ಕಂಡುಬರುತ್ತವೆ. ಇದನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ದೇಹಕ್ಕೆ ಹಲವಾರು ಪೋಷಕಾಂಶಗಳು ಸಿಗುತ್ತವೆ.
ರಾತ್ರಿ ಮಲಗುವ ಮುನ್ನ ಚಕ್ಕೆ ಬೆರೆಸಿದ ಹಾಲು ಸೇವಿಸುವುದರಿಂದ ಉತ್ತಮ ನಿದ್ದೆಗೆ ಸಹಾಯವಾಗುತ್ತದೆ.
ಮಲಬದ್ದತೆ, ಆಸಿಡಿಟಿ ಸಮಸ್ಯೆ ಎದುರಾದಾಗ ಚಕ್ಕೆ ಬೆರೆಸಿದ ಹಾಲು ಕುಡಿದರೆ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಚಕ್ಕೆ ಹಾಲು ದೇಹದ ತೂಕ ಇಳಿಸುವಲ್ಲಿಯೂ ಸಹಾಯ ಮಾಡುತ್ತದೆ.
ಚಕ್ಕೆ ಹಾಲಿನಲ್ಲಿ ಹೆಚ್ಚಿನ ಪ್ರಮಾಣದ ಆಂಟಿ ಆಕ್ಸಿಡೆಂಟ್ ಇರುತ್ತದೆ. ಶೀತ, ಕೆಮ್ಮು ಮುಂತಾದ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.
ಚಕ್ಕೆ ಮಧುಮೇಹ ರೋಗಿಗಳಿಗೂ ಪ್ರಯೋಜನಕಾರಿಯಾಗಿದೆ. ಇದು ರಕ್ತದ ಸಕ್ಕರೆಯನ್ನು ನಿಯಂತ್ರಣದಲ್ಲಿ ಇಡುತ್ತದೆ.
ಹಾಲಿಗೆ ಚಕ್ಕೆ ಮಾತು ಜೇನು ಬೆರೆಸಿ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಹಾಲಿಗೆ ಚಕ್ಕೆ ಪುಡಿಯನ್ನು ಬೆರೆಸಿ ಕುಡಿಯುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.