ಖಾಲಿ ಹೊಟ್ಟೆಯಲ್ಲಿ ಈ ಎಲೆಯನ್ನು ಸೇವಿಸಿದರೆ ವಾಸಿಯಾಗುವುದು ಈ ಕಾಯಿಲೆ !

ಕರಿಬೇವು

ನಿತ್ಯ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ೨ ಕರಿಬೇವಿನ ಎಲೆ ಅಗಿದು ಸೇವಿಸಿದರೆ ಅನೇಕ ರೀತಿಯ ಪ್ರಯೋಜನವಾಗುವುದು.

ರೋಗ ನಿರೋಧಕ ಶಕ್ತಿ

ಕರಿಬೇವು ಅಂತಿ ಆಕ್ಸಿಡೆಂಟ್ ನಲ್ಲಿ ಸಮೃದ್ದವಾಗಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕಣ್ಣುಗಳ ದೃಷ್ಟಿ

ಇದರಲ್ಲಿರುವ ವಿಟಮಿನ್ ಎ ಕಣ್ಣುಗಳ ದೃಷ್ಟಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ತೂಕ ನಷ್ಟ

ಕರಿಬೇವಿನಲ್ಲಿ ಅಂತಿ ಒಬೆಸಿಟಿ ಅಂಶಗಳಿದ್ದು, ಇದು ದೇಹದಲ್ಲಿ ಸೇರಿಕೊಂಡಿರುವ ಕೊಬ್ಬನ್ನು ಕರಗಿಸುತ್ತದೆ. ಇದರಿಂದ ತೂಕ ನಷ್ಟವಾಗುವುದು.

ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.

ಈ ಎಲೆಯಲ್ಲಿ ವಿಟಮಿನ್ ಸಿ, ವಿಟಮಿನ್ ಎಮತ್ತು ವಿಟಮಿನ್ ಇ ಅಡಗಿರುತ್ತದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.

ಕೂದಲು ಉದುರುವುದಿಲ್ಲ

ಕೂದಲು ಉದುರುವ ಸಮಸ್ಯೆಯಿಂದ ನೀವು ಬಳಲುತ್ತಿದ್ದರೆ ನಿತ್ಯ ಎರಡು ಕರಿಬೇವಿನ ಎಲೆಗಳನ್ನು ತಿನ್ನಬೇಕು. ಇದು ಕೂದಲು ಉದುರುವುದನ್ನು ತಡೆಯಲು ಸಹಾಯ ಮಾಡುತ್ತದೆ.

ಮಧುಮೇಹ ನಿವಾರಣೆ

ಅಷ್ಟೇ ಅಲ್ಲ ಬೆಳಿಗ್ಗೆ ಎದ್ದ ಕೂಡಲೇ ಈ ಎಲೆಯನ್ನು ಅಗಿದು ರಸ ಕುಡಿಯುವುದರಿಂದ ಮಧುಮೇಹ ಕಡಿಮೆಯಾಗುತ್ತದೆ.

ಜೀರ್ಣಕ್ರಿಯೆ

ಇದು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಹೀಗಾಗಿ ಗ್ಯಾಸ್, ಆಸಿಡಿಟಿ, ಮಲಬದ್ದತೆ ಸಮಸ್ಯೆಯನ್ನು ನಿವಾರಿಸುತ್ತದೆ.

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. zee kannada news ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story