ಇತ್ತೀಚಿನ ದಿನಗಳಲ್ಲಿ ಬಹುತೇಕ ಮಂದಿ ಅಧಿಕ ಕೊಲೆಸ್ಗ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಪರಿಹಾರವಾಗಿ ಬೆಳ್ಳುಳ್ಳಿಯನ್ನು ಬಳಸಬಹುದು.
ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಇನ್ಫ್ಲೇಮೇಟರಿ ಗುಣಗಳನ್ನು ಹೊಂದಿರುವ ಬೆಳ್ಳುಳ್ಳಿ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯ ನಿರ್ವಹಿಸುತ್ತದೆ.
ಬೆಳ್ಳುಳ್ಳಿಯಲ್ಲಿ ಜಿಂಕ್, ಮೆಗ್ನೆಶಿಯಂ, ಪೊಟ್ಯಾಷಿಯಂನಂಥಹ ಪೋಷಕ ತತ್ವಗಳು ಅಡಗಿವೆ.
ನಿತ್ಯ ಬೆಳ್ಳುಳ್ಳಿ ನೀರನ್ನು ಕುಡಿಯುವುದರಿಂದ ಅನೇಕ ರೋಗಗಳನ್ನು ಹೋಗಲಾಡಿಸಬಹುದು. ದೇಹವನ್ನು ಡಿಟಾಕ್ಸ್ ಮಾಡುವಲ್ಲಿ ಸಹಾಯ ಮಾಡುತ್ತದೆ.
2 ರಿಂದ 3 ಬೆಳ್ಳುಳ್ಳಿ ಎಸಳುಗಳನ್ನು ತೆಗೆದುಕೊಂಡು ಚೆನ್ನಾಗಿ ಜಜ್ಜಿಕೊಳ್ಳಿ. ನಂತರ ಅದನ್ನು ಒಂದು ಲೋಟ ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ.
ಸರಿಯಾಗಿ ಕುದಿ ಬಂದ ನಂತರ ಗ್ಯಾಸ್ ಆಫ್ ಮಾಡಿ, ಈ ನೀರು ತಣ್ಣಗಾದ ನಂತರ ಫಿಲ್ಟರ್ ಮಾಡಿ ಕುಡಿಯಿರಿ.
ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಬೆಳ್ಳುಳ್ಳಿ ನೀರು ಬಹಳ ಮುಖ್ಯ ಪಾತ್ರ ವಹಿಸುತ್ತದೆ.
ಉದರದ ಸಮಸ್ಯೆಯನ್ನು ಬೆಳ್ಳುಳ್ಳಿ ಪರಿಹರಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ನೀರು ಕುಡಿಯುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ. ಮಾತ್ರವಲ್ಲ ತೂಕ ಕಳೆದುಕೊಳ್ಳುವಲ್ಲಿ ಕೂಡಾ ಇದು ಸಹಕಾರಿ.