ಅನೇಕ ಜನರು ಬೆಳಗಿನ ಉಪಾಹಾರಕ್ಕಾಗಿ ಮೊಟ್ಟೆಗಳನ್ನು ತಿನ್ನಲು ಇಷ್ಟಪಡುತ್ತಾರೆ. ಇದರಿಂದ ಅನೇಕ ಆರೋಗ್ಯ ಸಂಬಂಧಿತ ಪ್ರಯೋಜನಗಳನ್ನು ಪಡೆಯಬಹುದು.
ಬೇಯಿಸಿದ ಮೊಟ್ಟೆಯಲ್ಲಿ ಹೆಚ್ಚಿನ ಪೋಷಕ ತತ್ವಗಳು ಅಡಗಿರುತ್ತವೆ. ದಿನಕ್ಕೆ 2 ಬೇಯಿಸಿದ ಮೊಟ್ಟೆ ತಿಂದರೆ ದೇಹಕ್ಕೆ ಉಪಯೋಗವಾಗುವುದು.
ಮೊಟ್ಟೆಯಲ್ಲಿ ಹೆಚ್ಚಿನ ಪ್ರಮಾಣದ ಪ್ರೋಟೀನ್ ಇರುತ್ತದೆ. ಇದು ಕ್ಯಾಲೋರಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಸೇವನೆಯಿಂದ ಹೆಚ್ಚು ಹೊತ್ತು ಹಸಿವಾಗುವುದಿಲ್ಲ.
ಮೊಟ್ಟೆಯ ಬಿಳಿ ಭಾಗ ದೇಹದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಮೊಟ್ಟೆಯ ಬಿಳಿ ಭಾಗದಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮಿನ್ ಮತ್ತು ಮಿನರಲ್ಸ್ ಇರುತ್ತದೆ. ಇದು ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ.
ಬೇಯಿಸಿದ ಮೊಟ್ಟೆಯನ್ನು ಸೇವಿಸುವುದರಿಂದ ಬ್ಲಡ್ ಪ್ರೆಶರ್ ನಿಯಂತ್ರಣವಾಗುತ್ತದೆ. ಇದರಲ್ಲಿರುವ ಪ್ರೋಟೀನ್ ಮತ್ತು ಅಮಿನೊ ಆಸಿಡ್ ದೇಹಕೆ ಬಹಳ ಪ್ರಯೋಜನಕಾರಿಯಾಗಿದೆ.
ನಿತ್ಯ 2 ಬೇಯಿಸಿದ ಮೊಟ್ಟೆ ತಿಂದರೆ ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು.
ಮೊಟ್ಟೆಯಲ್ಲಿ ವಿಟಮಿನ್ ಡಿ ಇರುತ್ತದೆ. ಇದು ಮೂಳೆಗಳನ್ನು ಸದೃಢವಾಗಿಸಲು ಸಹಾಯ ಮಾಡುತ್ತದೆ.
ಆದರೆ ನೆನಪಿರಲಿ ಮೊಟ್ಟೆ ಸೇವನೆಯನ್ನು ಸೀಮಿತ ಪ್ರಮಾಣದಲ್ಲಿಯೇ ಮಾಡಬೇಕು.