ಸೌತೆಕಾಯಿ ಹಸಿಯಾಗಿ ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ!
ಚಳಿಗಾಲದಲ್ಲಿ ಸೌತೆಕಾಯಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸುವುದರಿಂದ ದೇಹಕ್ಕೆ ಹಲವಾರು ಲಾಭಗಳಿವೆ.
ಮಧುಮೇಹ ಇರುವವರು ಸಾಮಾನ್ಯವಾಗಿ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಾರೆ.
ರಕ್ತದಲ್ಲಿನ ಸಕ್ಕರೆ ಮಟ್ಟ ಏರಿಕೆಯಾಗದಂತೆ ತಡೆಯಲು ಸೌತೆಕಾಯಿಯನ್ನು ಪ್ರತಿದಿನ ಸೇವಿಸಬೇಕು. ಇದರ ಗುಣಲಕ್ಷಣಗಳು ದೇಹದಲ್ಲಿ ನೀರಿನ ಅಂಶವನ್ನು ಹೆಚ್ಚಿಸುತ್ತವೆ.
ಅನಾರೋಗ್ಯಕರ ಆಹಾರಗಳನ್ನು ಅತಿಯಾಗಿ ಸೇವಿಸುವುದರಿಂದ ಸುಲಭವಾಗಿ ತೂಕ ಹೆಚ್ಚಾಗಬಹುದು. ಹಾಗಾಗಿ ಈ ಸಮಯದಲ್ಲಿ ಅನಾರೋಗ್ಯಕರ ಆಹಾರ ಸೇವಿಸದಿರುವುದು ತುಂಬಾ ಒಳ್ಳೆಯದು.
ಚಳಿಗಾಲದಲ್ಲಿ ತೂಕವನ್ನು ಕಳೆದುಕೊಳ್ಳಲು ಸೌತೆಕಾಯಿಯನ್ನು ಪ್ರತಿದಿನ ಆಹಾರದಲ್ಲಿ ಸೇವಿಸಬೇಕು.
ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರು ಚಳಿಗಾಲದಲ್ಲಿ ಹಲವು ಆಹಾರ ನಿಯಮಗಳನ್ನು ಪಾಲಿಸಬೇಕು. ಬೆಳಿಗ್ಗೆ ಸೌತೆಕಾಯಿ ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.
ಸೌತೆಕಾಯಿಯ ಆಯುರ್ವೇದ ಗುಣಗಳು ಮಲಬದ್ಧತೆ ಸಮಸ್ಯೆಗಳನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ.
ಚಳಿಗಾಲದಲ್ಲಿ ಹೃದ್ರೋಗಗಳು ಹೆಚ್ಚಾಗುವುದು ಸಹಜ. ಸೌತೆಕಾಯಿಯನ್ನು ಸಲಾಡ್‌ಗಳಲ್ಲಿ ಪ್ರತಿದಿನ ಸೇವಿಸಬೇಕು. ಹೃದಯದ ಆರೋಗ್ಯಕ್ಕೆ ಉತ್ತಮ.
ಸೌತೆಕಾಯಿ ಫೈಬರ್, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಲ್ಲಿ ಸಮೃದ್ಧವಾಗಿದೆ. ಇದರಿಂದ ರಕ್ತದೊತ್ತಡ ಸಮಸ್ಯೆಯೂ ನಿವಾರಣೆಯಾಗುತ್ತದೆ.