ಭಾರತದಲ್ಲಿ ಮಧುಮೇಹವು ಸಾಂಕ್ರಾಮಿಕವಾಗಿ ಮಾರ್ಪಟ್ಟಿದ್ದು, ರೋಗಿಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗಿದೆ.
ಹೆಚ್ಚುತ್ತಿರುವ ಮಧುಮೇಹ ಸಾಂಕ್ರಾಮಿಕದಿಂದ ರಾಷ್ಟ್ರದ ಆರೋಗ್ಯಕ್ಕೆ ಹೆಚ್ಚಿನ ಅಪಾಯ ಉಂಟಾಗುತ್ತಿದೆ.
2020ರಲ್ಲಿ ದೇಶದಲ್ಲಿ 77 ಮಿಲಿಯನ್ ವಯಸ್ಕರು ಮಧುಮೇಹದಿಂದ ಬಳಲುತ್ತಿದ್ದು, ಈ ಸಂಖ್ಯೆ 2045ರ ವೇಳೆಗೆ 134 ಮಿಲಿಯನ್ ತಲುಪಲಿದೆಯಂತೆ.
ಮಧುಮೇಹ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿಲ್ಲ, ಗ್ರಾಮೀಣ ಜನಸಂಖ್ಯೆಯ ಮೇಲೂ ಹೆಚ್ಚು ಪರಿಣಾಮ ಬೀರುತ್ತಿದೆ.
ಶುಗರ್ ಪೇಷೆಂಟ್ಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಭಾರತವನ್ನು ಮಧುಮೇಹಿಗಳ ರಾಜಧಾನಿ ಎಂದು ಕರೆಯಲಾಗುತ್ತಿದೆ.
ಮಧುಮೇಹ ಹೊಂದಿರುವ ವ್ಯಕ್ತಿಗಳ ಹೃದಯ ರಕ್ತನಾಳ ಮತ್ತು ರಕ್ತನಾಳಗಳ ಅಪಾಯ ಹೆಚ್ಚಿದ್ದು, ಮೂತ್ರಪಿಂಡದ ಸಮಸ್ಯೆ ಕಾಡುತ್ತಿದೆ.
ಆರೋಗ್ಯಕರ ಜೀವನಶೈಲಿ ಮತ್ತು ಉತ್ತಮ ಆಹಾರ ಸೇವನೆಯಿಂದ ಮಧುಮೇಹವನ್ನು ನಿಯಂತ್ರಿಸಬಹುದು.
ನಿಯಮಿತ ವ್ಯಾಯಾಮ ಆರೋಗ್ಯಕರ ತೂಕ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ.