ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಹಸಿರೆಲೆ ತರಕಾರಿಗಳು, ಸಿಟ್ರಸ್ ಹಣ್ಣು & ಆವಕಾಡೊಗಳಂತಹ ಸೂಪರ್‌ಫುಡ್ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಬಹುದು.
ಒಮೆಗಾ -3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿರುವ ಆಹಾರಗಳನ್ನು ಸೇವಿಸಿದರೆ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸಬಹುದು.
ಸಾಲ್ಮನ್, ಅಗಸೆಬೀಜ, ಮ್ಯಾಕೆರೆಲ್ ಮತ್ತು ವಾಲ್‌ನಟ್ಸ್‌ನಂತಹ ಆಹಾರಗಳು ಹೃದಯಕ್ಕೆ ತುಂಬಾ ಪ್ರಯೋಜನಕಾರಿ ಮತ್ತು ರಕ್ತದೊತ್ತಡ ನಿಯಂತ್ರಿಸಲು ಸಹಕಾರಿ.
ಪಾಲಕ್, ಕೇಲ್, ಕೊಲಾರ್ಡ್ ಗ್ರೀನ್ಸ್ ಸೇರಿದಂತೆ ಹಸಿರು ಎಲೆ ತರಕಾರಿಗಳು ಲುಟೀನ್ ಮತ್ತು ಕ್ಯಾರೊಟಿನಾಯ್ಡ್‌ಗಳನ್ನು ಹೊಂದಿರುತ್ತವೆ. ಇವು ಹೃದ್ರೋಗದ ಅಪಾಯದ ಜೊತೆಗೆ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.
ದೇಹದ ಉತ್ತಮ ಕಾರ್ಯನಿರ್ವಹಣೆಗೆ ಅಗತ್ಯವಾದ ಎಲ್ಲಾ ಪೋಷಕಾಂಶಗಳನ್ನು ಒಳಗೊಂಡಿರುವುದರಿಂದ ಆವಕಾಡೊವನ್ನು ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ.
ಮೊನೊಸಾಚುರೇಟೆಡ್ ಕೊಬ್ಬನ್ನು ಹೊಂದಿರುವ ಏಕೈಕ ಹಣ್ಣು ಇದಾಗಿದ್ದು, ಇದು ನಿಮ್ಮ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕಿತ್ತಳೆಯಂತಹ ಸಿಟ್ರಸ್ ಹಣ್ಣುಗಳು ಪೆಕ್ಟಿನ್ ಅನ್ನು ಹೊಂದಿರುತ್ತವೆ, ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.