ಚಿಯಾ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಫೈಬರ್‌ನಲ್ಲಿ ಸಮೃದ್ಧವಾಗಿವೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಚಿಯಾ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ಕರಗುವ ಫೈಬರ್ ಇರುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.
ಚಿಯಾ ಬೀಜಗಳು ಫೈಬರ್ ಮತ್ತು ಪ್ರೋಟೀನ್‌ನಿಂದ ಸಮೃದ್ಧವಾಗಿವೆ. ಇದು ನಿಮಗೆ ಹೆಚ್ಚು ಹೊತ್ತು ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ. ಇದು ತೂಕ ಇಳಿಕೆಗೆ ಸಹಾಯ ಮಾಡುತ್ತದೆ.
ಚಿಯಾ ಬೀಜಗಳು ಶಕ್ತಿಯ ಉತ್ತಮ ಮೂಲವಾಗಿದ್ದು, ಇದು ದೈಹಿಕ ಚಟುವಟಿಕೆ ಮತ್ತು ಕ್ರೀಡೆಗಳಿಗೆ ಸಹಾಯ ಮಾಡುತ್ತದೆ.
ಚಿಯಾ ಬೀಜಗಳು ಕ್ಯಾಲ್ಸಿಯಂ, ರಂಜಕ ಮತ್ತು ಮೆಗ್ನೀಸಿಯಮ್‌ನಂತಹ ಖನಿಜಗಳನ್ನು ಒಳಗೊಂಡಿರುತ್ತವೆ. ಇದು ಮೂಳೆಗಳ ಆರೋಗ್ಯಕ್ಕೆ ಮುಖ್ಯವಾಗಿದೆ.
ಚಿಯಾ ಬೀಜಗಳಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಹಾನಿಕಾರಕ ಫ್ರೀ ರಾಡಿಕಲ್‌ಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.
ಚಿಯಾ ಬೀಜಗಳನ್ನ ನೀವು ನೀರಿನಲ್ಲಿ ನೆನೆಸಿ ಕುಡಿಯಬಹುದು ಅಥವಾ ಸಲಾಡ್, ಮೊಸರು ಅಥವಾ ಓಟ್ ಮೀಲ್‌ನಲ್ಲಿ ಬೆರೆಸಿಯೂ ತಿನ್ನಬಹುದು.