ಮೊಸರು ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೆಲ್ಲಾ ಉತ್ತಮ ಪ್ರಯೋಜನ

Yashaswini V
Jun 05,2025

ಮೊಸರು

ಮೊಸರಿನಲ್ಲಿ ಪ್ರೊಟೀನ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ರಂಜಕ, ಸತು, ವಿಟಮಿನ್ ಎ, ಡಿ, ವಿಟಮಿನ್ ಬಿ2, ಬಿ6, ಬಿ12 ಸೇರಿದಂತೆ ಹಲವು ಪೋಷಕಾಂಶಗಳು ಕಂಡು ಬರುತ್ತವೆ.

ಆರೋಗ್ಯಕ್ಕೆ ಮೊಸರು

ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಮೊಸರನ್ನು ಪ್ರತಿದಿನ ಸೀಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಮೊಸರಿನಿಂದ ಆರೋಗ್ಯಕ್ಕೆ ಸಿಗುವ ಅತ್ಯುತ್ತಮ ಲಾಭಗಳೆಂದರೆ...

ಜೀರ್ಣಕ್ರಿಯೆ ಸುಧಾರಣೆ

ನಿತ್ಯ ಮೊಸರು ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದರಿಂದಾಗಿ ಗ್ಯಾಸ್ಟ್ರಿಕ್ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

ಇಮ್ಯುನಿಟಿ ಹೆಚ್ಚಳ

ಮೊಸರು ಸೇವನೆಯಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು.

ಮಲಬದ್ಧತೆ

ದೀರ್ಘಕಾಲದ ಮಲಬದ್ಧತೆ ಸಮಸ್ಯೆ ಇರುವವರಿಗೆ ಮೊಸರು ರಾಮಬಾಣವಿದ್ದಂತೆ. ನಿತ್ಯ ಒಂದು ಕಪ್ ಮೊಸರು ತಿನ್ನುವುದರಿಂದ ಮಲಬದ್ಧತೆ ನಿವಾರಣೆಯಾಗುತ್ತದೆ.

ಮೂಳೆಗಳಿಗೆ ಬಲ

ಮೊಸರು ತಿನ್ನುವುದರಿಂದ ಮೂಳೆಗಳು ಮತ್ತು ಕೀಲುಗಳನ್ನು ಆರೋಗ್ಯವಾಗಿರಿಸುತ್ತದೆ.

ಹಲ್ಲುಗಳಿಗೆ ಲಾಭದಾಯಕ

ಮೊಸರು ಸಾಕಷ್ಟು ಪ್ರಮಾಣದಲ್ಲಿ ಕ್ಯಾಲ್ಸಿಯಂ ಹೊಂದಿದ್ದು ಪ್ರತಿದಿನ ಮೊಸರು ಸೇವನೆಯಿಂದ ಹಲ್ಲುಗಳು ಬಲಗೊಳ್ಳುತ್ತವೆ.

ತೂಕ ಇಳಿಕೆ

ಕೆಲವು ಅಧ್ಯಯನಗಳ ಪ್ರಕಾರ, ಬೆಳಗಿನ ಉಪಹಾರದಲ್ಲಿ ಮೊಸರು ತಿನ್ನುವುದರಿಂದ ತೂಕ ಕಡಿಮೆಯಾಗುತ್ತದೆ ಎಂದು ತಿಳಿದುಬಂದಿದೆ.

ಕೊಲೆಸ್ಟ್ರಾಲ್

ಪ್ರತಿದಿನ ಸೀಮಿತ ಪ್ರಮಾಣದಲ್ಲಿ ಮೊಸರು ಸೇವನೆಯು ದೇಹದಲ್ಲಿ ಹೆಚ್ಚುವರಿ ಕೊಲೆಸ್ಟ್ರಾಲ್ ಅನ್ನು ಕರಗಿಸಲು ಸಹಾಯಕವಾಗಿದೆ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story