ವಿಶೇಷ ಪ್ರಯೋಜನ

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲವನ್ನು ಸೇವಿಸುವುದರಿಂದ ನಮ್ಮ ಆರೋಗ್ಯಕ್ಕೆ ವಿಶೇಷ ಪ್ರಯೋಜನ ದೊರೆಯಲಿದೆ.

Puttaraj K Alur
Mar 20,2025

ಪೊಟ್ಯಾಸಿಯಮ್, ಮೆಗ್ನೀಸಿಯಮ್

ಬೆಲ್ಲದಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ತಾಮ್ರದ ಅಂಶ ಸಮೃದ್ಧವಾಗಿರುತ್ತದೆ.

ಜೀರ್ಣಾಂಗ ವ್ಯವಸ್ಥೆ

ಬೆಲ್ಲವು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುವುದು ಮಾತ್ರವಲ್ಲದೆ ಎಲ್ಲಾ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ನಿವಾರಿಸುತ್ತದೆ.

ಔಷಧೀಯ ಮಹತ್ವ

ಆಯುರ್ವೇದದಲ್ಲಿ ಬೆಲ್ಲಕ್ಕೆ ಔಷಧೀಯ ಮಹತ್ವ ನೀಡಲಾಗಿದ್ದು, ಹಲವಾರು ಆರೋಗ್ಯಕರ ಗುಣಗಳನ್ನು ಹೊಂದಿದೆ.

ಸಕ್ಕರೆಗೆ ಪರ್ಯಾಯ

ಬೆಲ್ಲವನ್ನು ಸಕ್ಕರೆಗೆ ಪರ್ಯಾಯವಾಗಿ ಬಳಸಬಹುದು ಹಾಗೂ ಸಕ್ಕರೆ ಸೇವಿಸುವುದಕ್ಕಿಂತ ಬೆಲ್ಲ ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದು.

ಎಲ್ಲಾ ಸಮಸ್ಯೆಗಳಿಗೂ ಪರಿಹಾರ

ಬೆಲ್ಲವು ಅನೇಕ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಬೆಲ್ಲದ ಸೇವನೆಯಿಂದ ದೇಹದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ.

ಗ್ಯಾಸ್ಟ್ರಿಕ್, ಅಸಿಡಿಟಿ

ಬೆಲ್ಲವು ಜೀರ್ಣಕಾರಿ ಕಿಣ್ವಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಗ್ಯಾಸ್ಟ್ರಿಕ್, ಅಸಿಡಿಟಿಯಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ಮಲಬದ್ಧತೆ

ನಿಯಮಿತವಾಗಿ ಬೆಲ್ಲ ಸೇವನೆಯು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

VIEW ALL

Read Next Story