ನಮ್ಮಲ್ಲಿ ಕೆಲವರು ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸುತ್ತಾರೆ. ರುಚಿಗಾಗಿ ಹಸಿ ಈರುಳ್ಳಿ ಸೇವಿಸುವುದು ಸತ್ಯವೇ ಆದರೂ ಇದು ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.

ಆರೋಗ್ಯದ ಗಣಿ

ಈರುಳ್ಳಿಯಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಗುಣಲಕ್ಷಣಗಳಿದ್ದು ಇದನ್ನು ಹೃದಯದ ಆರೋಗ್ಯಕ್ಕೆ ತುಂಬಾ ರ್ಪಯೋಜನಕಾರಿ ಎಂದು ಹೇಳಲಾಗುತ್ತದೆ. ಹಸಿ ಈರುಳ್ಳಿಯ ಪ್ರಯೋಜನಗಳ ಬಗ್ಗೆ ತಿಳಿಯೋಣ...

ಜೀವಕೋಶದ ಹಾನಿ ತಡೆಯಲು ಪ್ರಯೋಜನಕಾರಿ

ಹಸಿ ಈರುಳ್ಳಿ ಸೇವನೆಯು ಉತ್ಕರ್ಷಣ ನಿರೋಧಕಗಳು ಸ್ವತಂತ್ರ ರಾಡಿಕಲ್ ಅಣುಗಳ ವಿರುದ್ಧ ಹೋರಾಡುವ ಮೂಲಕ ಜೀವಕೋಶದ ಹಾನಿಯನ್ನು ತಡೆಯಲು ಸಹಾಯ ಮಾಡಬಹುದು .

ಬ್ಲಡ್ ಶುಗರ್ ಕಂಟ್ರೋಲ್

ಹಸಿ ಈರುಳ್ಳಿ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕೂದಸ್ ತುಂಬಾ ಪ್ರಯೋಜನಕಾರಿ ಆಗಿದೆ.

ಪೋಷಕಾಂಶಗಳ ಗಣಿ

ಹಸಿ ಈರುಳ್ಳಿಯಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಇದು ಪೊಟ್ಯಾಸಿಯಮ್ ಮತ್ತು ಮ್ಯಾಂಗನೀಸ್‌ನ ಉತ್ತಮ ಮೂಲವಾಗಿದ್ದು ಚಯಾಪಚಯವನ್ನು ಹೆಚ್ಚಿಸಲು ಸಹಾಯಕವಾಗಿದೆ.

ಕ್ಯಾನ್ಸರ್ ಅಪಾಯದಿಂದ ದೂರ

ಹಸಿ ಈರುಳ್ಳಿ ಸೇವನೆಯು ಕ್ಯಾನ್ಸರ್ ಬೆಳವಣಿಗೆಯ ಅಪಾಯವನ್ನು ತಡೆಯುತ್ತದೆ.

ವಿಟಮಿನ್ ಸಿ

ಹಸಿ ಈರುಳ್ಳಿಯಲ್ಲಿ ವಿಟಮಿನ್ ಸಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರಲಿದ್ದು ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಮೂಳೆಗಳ ಆರೋಗ್ಯ

ಈರುಳ್ಳಿ ಕೆಲವು ಜನರಲ್ಲಿ ಮೂಳೆ ಸಾಂದ್ರತೆಯನ್ನು ಸುಧಾರಿಸುತ್ತದೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ.

ಬ್ಯಾಕ್ಟೀರಿಯಾ ವಿರೋಧಿ

ಈರುಳ್ಳಿಯಲ್ಲಿರುವ ಅಲಿಸಿನ್‌ನ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಕೊಲೊನ್ ಹಾನಿಕಾರಕ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಣ

ಆರೋಗ್ಯ ತಜ್ಞರ ಪ್ರಕಾರ, ಈರುಳ್ಳಿಯಲ್ಲಿರುವ ಫ್ಲೈವನಾಯ್ಡ್ ಗುಣಗಳು ನಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದರಿಂದ ಹೃದಯ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯುವಂತೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.

VIEW ALL

Read Next Story