ಕೀಲುಗಳಲ್ಲಿ ಹರಳುಗಟ್ಟಿದ ಯೂರಿಕ್ ಆಂಳವು ಅತೀವವಾದ ನೋವನ್ನು ಉಂಟುಮಾಡುತ್ತದೆ. ಇದನ್ನೂ ಗೌಟ್ ಎಂತಲೂ ಕರೆಯಲಾಗುತ್ತದೆ.
ದೇಹದಲ್ಲಿ ಯೂರಿಕ್ ಆಮ್ಲ ಹೆಚ್ಚಾಗುವುದು ಸಾಮಾನ್ಯ ಪ್ರಕ್ರಿಯೆಯಾಗಿದ್ದರೂ ಸಹ ಇದನ್ನು ನಿರ್ಲಕ್ಷಿಸಿದರೆ ಗಂಭೀರ ಕಾಯಿಲೆಗಳ ಅಪಾಯ ಹೆಚ್ಚಾಗಬಹುದು.
ದೇಹದಲ್ಲಿ ಯೂರಿಕ್ ಆಮ್ಲ ಹೆಚ್ಚಾದಾಗ ಕೆಲವು ಬೀಜಗಳ ಸೇವನೆಯು ಕೀಲುಗಳಲ್ಲಿ ಹರಳುಗಟ್ಟಿರುವ ಯೂರಿಕ್ ಆಮ್ಲವನ್ನು ಸುಲಭವಾಗಿ ಕರಗಿಸುತ್ತವೆ. ಅಂತಹ ಐದು ಚಮತ್ಕಾರಿ ಬೀಜಗಳೆಂದರೆ...
ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್, ಲಿಗ್ನಾನ್‌ಗಳಲ್ಲಿ ಸಮೃದ್ಧವಾಗಿರುವ ಅಗಸೆ ಬೀಜಗಳು ಯೂರಿಕ್ ಆಮ್ಲ ನಿಯಂತ್ರಣಕ್ಕೆ ರಾಮಬಾಣವಾಗಿದೆ.
ಮೆಗ್ನೀಸಿಯಮ್, ಸತು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಹೇರಳವಾಗಿರುವ ಕುಂಬಳಕಾಯಿ ಬೀಜ ದೇಹದಲ್ಲಿ ಯೂರಿಕ್ ಆಸಿಡ್ ಅನ್ನು ತ್ವರಿತವಾಗಿ ಕರಗಿಸುತ್ತದೆ.
ಒಮೆಗಾ-3, ಫೈಬರ್, ಕ್ಯಾಲ್ಸಿಯಂ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಚಿಯಾ ಬೀಜಗಳನ್ನು ಯೂರಿಕ್ ಆಸಿಡ್ ನಿಯಂತ್ರಿಸಲು ಸೂಪರ್‌ಫುಡ್ ಎಂದು ಪರಿಗಣಿಸಲಾಗುತ್ತದೆ.
ಎಳ್ಳಿನಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್, ಫೈಟೊನ್ಯೂಟ್ರಿಯೆಂಟ್‌ಗಳು ಸಮೃದ್ಧವಾಗಿರುವುದರಿಂದ ಇದರ ಬಳಕೆಯಿಂದ ಕೀಲುಗಳಲ್ಲಿ ಹರಳುಗಟ್ಟಿರುವ ಯೂರಿಕ್ ಆಸಿಡ್ ಮಂಜಿನಂತೆ ಕರಗುತ್ತದೆ.
ವಿಟಮಿನ್ ಇ, ಸೆಲೆನಿಯಮ್ ಮತ್ತು ಆರೋಗ್ಯಕರ ಕೊಬ್ಬಿನಿಂದ ತುಂಬಿರುವ ಸೂರ್ಯಕಾಂತಿ ಬೀಜಗಳನ್ನು ತಿನ್ನುವುದರಿಂದ ಯೂರಿಕ್ ಆಸಿಡ್ ತ್ವರಿತವಾಗಿ ಕರಗುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.