ಮಧುಮೇಹದಿಂದ ತೂಕ ಇಳಿಕೆವರೆಗೆ ವರದಾನವಿದ್ದಂತೆ ಅಗಸೆಬೀಜ
ಅಗಸೆಬೀಜವು ಒಮೆಗಾ -3 ಕೊಬ್ಬಿನಾಮ್ಲ, ಪ್ರೋಟೀನ್, ಫೈಬರ್, ಲಿಗ್ನಾನ್, ವಿಟಮಿನ್ ಬಿ, ಸೆಲೆನಿಯಮ್, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಸತುವಿನಿಂದ ಸಮೃದ್ಧವಾಗಿದ್ದು, ಆರೋಗ್ಯಕ್ಕೆ ಇದು ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ.
2 ಚಮಚ ಅಗಸೆಬೀಜವನ್ನು 2 ಗ್ಲಾಸ್ ನೀರಿನಲ್ಲಿ ಕುದಿಸಿ ಫಿಲ್ಟರ್ ಮಾಡಿ ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಗಸೆ ಬೀಜವನ್ನು ನೀರಿನಲ್ಲಿ ಕುದಿಸಿ ಶೋಧಿಸಿ ಕುಡಿಯುವುದರಿಂದ ಥೈರಾಯ್ಡ್ ಸಮಸ್ಯೆಯಿಂದಲೂ ಪರಿಹಾರ ಪಡೆಯಯಬಹುದು.
ಮೂರು ತಿಂಗಳುಗಳ ಕಾಲ ನಿರಂತರವಾಗಿ ಅಗಸೆಬೀಜದ ಕಷಾಯ ಕುಡಿಯುವುದರಿಂದ ಹಾರ್ಟ್ ಬ್ಲಾಕೇಜ್ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ಪಾರ್ಶ್ವವಾಯು ಸಮಸ್ಯೆಗೆ ಒಳಗಾದವರು ಪ್ರತಿದಿನ ಅಗಸೆಬೀಜದ ಕಷಾಯ ಸೇವಿಸುವುದರಿಂದ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ನಿತ್ಯ ಖಾಲಿ ಹೊಟ್ಟೆಯಲ್ಲಿ ಅರ್ಧ ಚಮಚ ಅಗಸೆ ಬೀಜವನ್ನು ಸೇವಿಸುವುದರಿಂದ ಕೂದಲು ಉದುರುವ ಸಮಸ್ಯೆಯಿಂದ ಪರಿಹಾರ ದೊರೆಯುತ್ತದೆ.
ನಿತ್ಯ ಅಗಸೆಬೀಜದಿಂದ ತಯಾರಿಸಿದ ಕಷಾಯ ಕುಡಿಯುವುದರಿಂದ ಕೀಲು ನೋವು ನಿವಾರಣೆಯಾಗುತ್ತದೆ.
ಪ್ರತಿದಿನ ಅಗಸೆಬೀಜದ ಕಷಾಯ ಕುಡಿಯುವುದರಿಂದ ದೇಹದಲ್ಲಿ ಶೇಖರಣೆಯಾಗಿರುವ ಅಧಿಕ ಕೊಬ್ಬನ್ನು ಕರಗಿಸಿ ಸುಲಭವಾಗಿ ತೂಕ ಇಳಿಸಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.