ದೇಹದಲ್ಲಿ ಇದ್ದಕ್ಕಿದ್ದಂತೆ ಹೆಚ್ಚಾಗುವ ಕೆಟ್ಟ ಕೊಲೆಸ್ಟ್ರಾಲ್ ಯಾವತ್ತಿಗೂ ಕೂಡ ಅಪಾಯಕಾರಿ.
ಈ ಕೆಟ್ಟ ಕೊಲೆಸ್ಟ್ರಾಲ್‌ನಿಂದ ದೇಹದಲ್ಲಿ ರಕ್ತ ಸಂಚಾರ ಸರಿಯಾಗಿ ನಡೆಯದೇ ಹೃದಯ ಬಡಿತವೇ ನಿಂತು ಹೋಗಬಹುದು.
ಬದಲಾದ ಜೀವನಶೈಲಿಯ ಮತ್ತು ಕೆಟ್ಟ ಆಹಾರಪದ್ಧತಿಯಿಂದ ಇಂದು ಅನೇಕರು ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಾರೆ.
ದೇಹದ ರಕ್ತನಾಳಗಳಲ್ಲಿ ಸೇರಿಕೊಳ್ಳುವ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದ್ರೆ ಅನೇಕ ಆರೋಗ್ಯ ಸಮಸ್ಯೆಗಳು ಬರುತ್ತವೆ.
ಸೈಲೆಂಟ್ ಕಿಲ್ಲರ್ ಕಾಯಿಲೆ ಎಂದು ಕರೆಯುವ ಕೆಟ್ಟ ಕೊಲೆಸ್ಟ್ರಾಲ್‌ನಿಂದ ನಿಮ್ಮ ಜೀವಕ್ಕೆ ದೊಡ್ಡ ಅಪಾಯ ಎದುರಾಗುತ್ತದೆ.
ದೇಹದ ರಕ್ತನಾಳಗಳಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದ್ರೆ ಹೃದಯಾಘಾತ ಮತ್ತು ಪಾರ್ಶ್ವವಾಯು ಸಮಸ್ಯೆ ಹೆಚ್ಚುತ್ತದೆ.
ಕೆಟ್ಟ ಕೊಲೆಸ್ಟ್ರಾಲ್‌ನಿಂದ ಮುಕ್ತಿ ಪಡೆಯಲು ಆರೋಗ್ಯಕರ ಆಹಾರ ಪದ್ಧತಿ ಮತ್ತು ವ್ಯಾಯಾಮ, ವಾಕಿಂಗ್ ಮತ್ತು ಯೋಗ ರೂಢಿಸಿಕೊಳ್ಳಬೇಕು.