ಈ ಆಹಾರಗಳನ್ನು ಸೇವಿಸಿದರಷ್ಟೇ ಸಾಕು ದೃಷ್ಟಿ ಚುರುಕಾಗಲು

Ranjitha R K
Dec 19,2024

ಕಣ್ಣಿನ ಆರೋಗ್ಯ

ನಮ್ಮ ದೇಹದ ಅತ್ಯಂತ ಸೂಕ್ಷ್ಮವಾದ ಅಂಗ ಎಂದರೆ ಕಣ್ಣು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಕೂಡಾ ದೃಷ್ಟಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಕಣ್ಣಿನ ಆರೋಗ್ಯಕ್ಕೆ ಆಹಾರ

ಕೆಲವು ಆಹಾರಗಳನ್ನು ಸೇವಿಸುವ ಮೂಲಕವೂ ಕಣ್ಣುಗಳ ದೃಷ್ಟಿಯನ್ನು ಚುರುಕುಗೊಳಿಸುವುದು ಸಾಧ್ಯವಾಗುತ್ತದೆ.

ಸಿಟ್ರಸ್ ಹಣ್ಣುಗಳು

ಸಿಟ್ರಸ್ ಹಣ್ಣುಗಳು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಇದು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಸಿಟ್ರಸ್ ಹಣ್ಣುಗಳು

ಕಿತ್ತಳೆ, ದ್ರಾಕ್ಷಿ, ನಿಂಬೆ ಹಣ್ಣುಗಳನ್ನು ಸೇವಿಸುವ ಮೂಲಕ ದೃಷ್ಟಿಯನ್ನು ಹೆಚ್ಚಿಸಿಕೊಳ್ಳಬಹುದು.

ನೆಲ್ಲಿಕಾಯಿ

ನೆಲ್ಲಿಕಾಯಿ ಕೂಡಾ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು.ಇದು ಕಣ್ಣಿನ ದೃಷ್ಟಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

ಸೊಪ್ಪು

ಪಾಲಕ್ ಸೊಪ್ಪು ಮತ್ತು ಮೆಂತ್ಯೆ ಸೇವನೆ ಕೂಡಾ ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುತ್ತದೆ.

ಮೀನು

ಮೀನಿನಲ್ಲಿರುವ ಒಮೆಗಾ -3 ಕೊಬ್ಬಿನಾಮ್ಲಗಳು, ವಿಟಮಿನ್ ಎ ಮತ್ತು ಸತುವುಗಳಂತಹ ಪೋಷಕಾಂಶಗಳು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದು ಕಣ್ಣಿನ ಊತವನ್ನು ಕಡಿಮೆ ಮಾಡುತ್ತದೆ ಮತ್ತು ದೃಷ್ಟಿ ಸುಧಾರಿಸುತ್ತದೆ.

ಮೊಟ್ಟೆ

ಮೊಟ್ಟೆಯಲ್ಲಿ ಕೂಡಾ ವಿಟಮಿನ್ ಎ ಮತ್ತು ಸತು ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಇದು ಕಣ್ಣಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.


ಸೂಚನೆ :ಮೇಲಿನ ಲೇಖನ ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.

VIEW ALL

Read Next Story