ಯೂರಿಕ್‌ ಆಸಿಡ್‌ ಸಮಸ್ಯೆಯಿದ್ದರೆ ಸೇವಿಸಲೇಬೇಕಾದ ಆಹಾರಗಳಿವು

Bhavishya Shetty
Jul 22,2024

ಸಮಸ್ಯೆ

ಯೂರಿಕ್ ಆಮ್ಲವು ದೇಹದಲ್ಲಿ ಹೆಚ್ಚಾದಾಗ ಕೀಲುಗಳಲ್ಲಿ ನೋವು, ಊತ, ಸಂಧಿವಾತ ಮೊದಲಾದ ಸಮಸ್ಯೆಗಳು ಬರಲು ಪ್ರಾರಂಭಿಸುತ್ತವೆ. ಅಷ್ಟೇ ಅಲ್ಲ ಯೂರಿಕ್ ಆಸಿಡ್ ಹೆಚ್ಚಾದಾಗ ಲಿವರ್ ಸರಿಯಾಗಿ ಕೆಲಸ ಮಾಡುವುದಿಲ್ಲ.

ಕಾಳಜಿ

ಇನ್ನು ನಾವು ದಿನನಿತ್ಯ ಸೇವಿಸುವ ಕೆಲ ಆಹಾರಗಳು ದೇಹದಲ್ಲಿ ಯೂರಿಕ್ ಆಮ್ಲವನ್ನು ಹೆಚ್ಚಿಸುತ್ತದೆ. ಆದ್ದರಿಂದ, ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

ಬಾಳೆಹಣ್ಣು

ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದಾಗ, ಕೀಲು ನೋವು ಪ್ರಾರಂಭವಾಗುತ್ತದೆ. ಹಾಗಿರುವಾಗ ನಿಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಸೇರಿಸಿಕೊಳ್ಳಬಹುದು. ಈ ಹಣ್ಣುಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದಲ್ಲಿ ಯೂರಿಕ್ ಆಮ್ಲದ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಸೇಬು

ಸೇಬು ಫೈಬರ್‌ʼನ ಸಮೃದ್ಧ ಮೂಲವಾಗಿದೆ. ಯೂರಿಕ್ ಆಮ್ಲವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಇದಲ್ಲದೆ, ಸೇಬಿನಲ್ಲಿರುವ ಮ್ಯಾಲಿಕ್ ಆಮ್ಲವು ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕಾಫಿ

ಹೆಚ್ಚಿನ ಯೂರಿಕ್ ಆಸಿಡ್ ಮಟ್ಟವನ್ನು ಸಾಮಾನ್ಯಗೊಳಿಸಲು ಕಾಫಿ ಕುಡಿಯಿರಿ. ಹೆಚ್ಚಿನ ಯೂರಿಕ್ ಆಮ್ಲದಿಂದ ತೊಂದರೆಗೊಳಗಾಗಿದ್ದರೆ, ಆಹಾರದಲ್ಲಿ ಸೀಮಿತ ಪ್ರಮಾಣದಲ್ಲಿ ಕಾಫಿಯನ್ನು ಸೇರಿಸಿ.

ನಿಂಬೆ ರಸ

ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ನಿಂಬೆ ರಸವು ಸಾಕಷ್ಟು ಪ್ರಯೋಜನಕಾರಿ. ಇದು ಯೂರಿಕ್ ಆಮ್ಲದ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಸೂಚನೆ

ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಅದನ್ನು ಅನುಮೋದಿಸುವುದಿಲ್ಲ.

VIEW ALL

Read Next Story