ಡಯಾಬಿಟೀಸ್ ರೋಗಿಗಳಿಗೆ ಈ ಸೊಪ್ಪೇ ಸಂಜೀವಿನಿ

Ranjitha R K
Jan 15,2025

ಮಧುಮೇಹ ನಿಯಂತ್ರಣ ಹೇಗೆ ?

ಆಹಾರ ತಜ್ಞರ ಪ್ರಕಾರ, ಮಧುಮೇಹ ರೋಗಿಗಳು ಈ ಹಸಿರು ಎಲೆಗಳನ್ನು ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕರಿಬೇವು

ದಿನಕ್ಕೆ 10 ಕರಿಬೇವು ಎಲೆಗಳನ್ನು ಅಗಿಯಬಹುದು ಅಥವಾ ಅದರ ರಸವನ್ನು ತೆಗೆದು ಕುಡಿಯಬಹುದು. ಹೀಗೆ ಮಾಡಿದರೆ ರಕ್ತದಲ್ಲಿನ ಹೆಚ್ಚಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

ಬೇವಿನ ಎಲೆಗಳು

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆಗಳನ್ನು ಜಗಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

ಇನ್ಸುಲಿನ್ ಪ್ಲಾಂಟ್:

ಪ್ರತಿದಿನ ಸುಮಾರು ಒಂದು ತಿಂಗಳ ಕಾಲ ಇನ್ಸುಲಿನ್ ಸಸ್ಯದ ಎಲೆಯನ್ನು ಅಗಿಯುತ್ತಿದ್ದರೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಲಭವಾಗಿ ನಿಯಂತ್ರಿಸಬಹುದು.

ಸಬ್ಬಸಿಗೆ ಸೊಪ್ಪು :

ನಿಯಮಿತವಾಗಿ ಸಬ್ಬಸಿಗೆ ಸೊಪ್ಪು ಸೇವಿಸಿದರೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸುಲಭವಾಗಿ ನಿಯಂತ್ರಿಸುವುದು ಸಾಧ್ಯವಾಗುತ್ತದೆ.

ಅಲೋವೆರಾ :

ಅಲೋವೆರಾ ಎಲೆಗಳಿಂದ ತೆಗೆದ ಜೆಲ್ ಅನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕೂಡಾ ಕಡಿಮೆ ಮಾಡಬಹುದು.

ತುಳಸಿ ಎಲೆಗಳು

ತುಳಸಿ ಎಲೆಗಳ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಏರಿಕೆಯನ್ನು ತಡೆಯಬಹುದು . ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 2-3 ತುಳಸಿ ಎಲೆಗಳನ್ನು ಸೇವಿಸಿದರೆ ವ್ಯತ್ಯಾಸ ತಿಳಿಯುತ್ತದೆ.

ಮಾವಿನ ಎಲೆಗಳು

10 ರಿಂದ 15 ಮಾವಿನ ಎಲೆಗಳನ್ನು ಕುದಿಸಿ ರಾತ್ರಿಯಿಡೀ ನೀರಿನಲ್ಲಿ ಹಾಗೆಯೇ ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಫಿಲ್ಟರ್ ಮಾಡಿ ಮತ್ತು ಖಾಲಿ ಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.


ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.

VIEW ALL

Read Next Story